ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ವಿಸ್ತರಣೆ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು.

ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​
ಅರವಿಂದ್ ಕೇಜ್ರಿವಾಲ್ Image Credit source: News 18
Follow us
|

Updated on:May 29, 2024 | 11:29 AM

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)​ ಜಾಮೀನು ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ಹಿಂದಿನ ಆದೇಶದಂತೆ ಜೂನ್ 2ರಂದು ಜೈಲಿಗೆ ಹೋಗಬೇಕಾಗುತ್ತದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರು ಜೈಲು ಸೇರಿದ್ದರು. ಕೆಲವೇ ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದರು.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ. ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್​, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ.

ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮತ್ತಷ್ಟು ಓದಿ: ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾದ ತಕ್ಷಣ, ಅಭಿಷೇಕ್ ಮನು ಸಿಂಘ್ವಿ ನಮಗೆ ಇನ್ನೂ ಏಳು ದಿನಗಳ ಮಧ್ಯಂತರ ಜಾಮೀನು ವಿಸ್ತರಿಸಬೇಕೆಂದು ಹೇಳಿದರು. ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಇದು ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯದ ದುರ್ಬಳಕೆಯಲ್ಲ ಎಂದರು.

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:26 am, Wed, 29 May 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ