Liquor Shops: ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

| Updated By: ಸುಷ್ಮಾ ಚಕ್ರೆ

Updated on: Jul 26, 2021 | 4:48 PM

Supreme Court: ರಾಷ್ಟ್ರೀಯ ಮತ್ತು ರಾಜ್ಯ ಹೈವೇಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

Liquor Shops: ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ
ಮದ್ಯದಂಗಡಿ
Follow us on

ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಇನ್ನು ಮುಂದೆ ಲೈಸೆನ್ಸ್​ ನೀಡಬಾರದು ಎಂದು ಸುಪ್ರೀಂಕೋರ್ಟ್​ (Supreme Court) ನಿರ್ದೇಶನ ನೀಡಿದೆ. ಹೈವೇಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ (Liquor Shops) ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ಹಾಗೇ, ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ (National Highway) ಹಾಗೂ ರಾಜ್ಯ ಹೆದ್ದಾರಿಗಳ (State Highway) ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ.

ಸುಪ್ರೀಂ ಕೋರ್ಟ್​ನಿಂದ ಈ ಆದೇಶ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶವನ್ನು ಕಳುಹಿಸಿದೆ. ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಸುಪ್ರೀಂ ಕೋರ್ಟ್​ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದೆ. ಹಾಗೇ, ಕುಡಿದು ವಾಹನ ಚಲಾಯಿಸುವವರಿಗೆ ನೀಡಲಾಗುವುದನ್ನು ತಡೆಯಲು ಸೂಕ್ತ ಅಭಿಯಾನಗಳನ್ನು ನಡೆಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಬಗ್ಗೆ ಪತ್ರಿಕೆಗಳು ಹಾಗೂ ಚಾನೆಲ್​ಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಮುಂದಾಗಿದೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕೇವಲ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ಬೇಕಾದ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡುತ್ತದೆ. ಈ ಸಚಿವಾಲಯಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ಜಾಗಗಳಲ್ಲಿ ತೆರೆಯಲಾಗುವ ಉದ್ಯಮ ಅಥವಾ ಅಂಗಡಿಗಳ ಮೇಲೆ ಯಾವುದೇ ನಿಯಂತ್ರಣವೂ ಇರುವುದಿಲ್ಲ. ಹೆದ್ದಾರಿಗಳ ಪಕ್ಕದಲ್ಲಿ ಅಂಗಡಿಗಳನ್ನು ತೆರೆಯಲು ಲೈಸೆನ್ಸ್​ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುತ್ತದೆ.

ಹೀಗಾಗಿ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಎಷ್ಟು ಮದ್ಯದಂಗಡಿಗಳಿವೆ, ಎಷ್ಟು ಮದ್ಯದಂಗಡಿಗಳನ್ನು ತೆರವುಗೊಳಿಸಬೇಕೆಂಬ ಬಗ್ಗೆ ಯಾವುದೇ ಅಂಕಿ-ಅಂಶಗಳನ್ನು ಕಲೆಹಾಕಿಲ್ಲ. ಈ ಕೆಲಸವನ್ನು ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾಡಲಿವೆ.

ಇದನ್ನೂ ಓದಿ: MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?

BS Yediyurappa: ಪ್ರವಾಹ, ಕೋವಿಡ್ ಸಂಕಷ್ಟ, ಆಪರೇಷನ್ ಕಮಲ, ಜೈಲು ವಾಸ; ಸವಾಲುಗಳನ್ನು ಮೆಟ್ಟಿ ನಿಂತ ಛಲಗಾರ ಯಡಿಯೂರಪ್ಪ

(No more liquor shops along National Highway and State Highways Supreme Court Directs on Monday)