Narendra Modi: ನೈಲ್ ಪ್ರಶಸ್ತಿಯೂ ಸೇರಿ 9 ವರ್ಷದಲ್ಲಿ ಪ್ರಧಾನಿ ಮೋದಿಗೆ 13 ದೇಶಗಳಿಂದ ಸಿಕ್ಕ ಅಗ್ರಮಾನ್ಯ ಪ್ರಶಸ್ತಿಗಳ ಪಟ್ಟಿ

List of International Awards For Narendra Modi: ಈಜಿಪ್ಟ್​ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿದೆ. 9 ವರ್ಷದಲ್ಲಿ ಅವರು 13 ದೇಶಗಳಿಂದ ಉನ್ನತ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅದರ ಪಟ್ಟಿ ಇಲ್ಲಿದೆ...

Narendra Modi: ನೈಲ್ ಪ್ರಶಸ್ತಿಯೂ ಸೇರಿ 9 ವರ್ಷದಲ್ಲಿ ಪ್ರಧಾನಿ ಮೋದಿಗೆ 13 ದೇಶಗಳಿಂದ ಸಿಕ್ಕ ಅಗ್ರಮಾನ್ಯ ಪ್ರಶಸ್ತಿಗಳ ಪಟ್ಟಿ
ನರೇಂದ್ರ ಮೋದಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 25, 2023 | 5:21 PM

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಅಂತಾರಾಷ್ಟ್ರೀಯ ಮನ್ನಣೆ, ಗೌರವ ಬಹಳಷ್ಟು ಸಿಕ್ಕಿವೆ. ಈ ಸಾಲಿಗೆ ಈಗ ಈಜಿಪ್ಟ್​ನ ಅತ್ಯುಚ್ಚ ನಾಗರಿಕ ಪ್ರಶಸ್ತಿಯೂ ಸೇರಿದೆ. ಈಜಿಪ್ಟ್ ದೇಶಕ್ಕೆ ನರೇಂದ್ರ ಮೋದಿ ಭೇಟಿ ಕೊಟ್ಟ ಹೊತ್ತಿನಲ್ಲಿ ಅಲ್ಲಿನ ಅಧ್ಯಕ್ಷ ಅಬ್ದಲ್ ಫತ್ತಾಹ್ ಎಲ್ಸಿಸಿ ಅವರು ಮೋದಿಗೆ ‘ಆರ್ಡರ್ ಆಫ್ ನೈಲ್’ ಪ್ರಶಸ್ತಿ ನೀಡಿ ಗೌರವಿಸಿದರು. ನರೇಂದ್ರ ಮೋದಿ ಅವರಿಗೆ ಇದು ವಿವಿಧ ದೇಶಗಳ ಉನ್ನತ ಗೌರವ ಮತ್ತು ಪುರಸ್ಕಾರಗಳು ಸಿಗುತ್ತಿರುವುದು ಇದು 13ನೇಯದ್ದು. ನೈಲ್ ಎಂಬುದು ಈಜಿಪ್ಟ್​ನ ಪ್ರಮುಖ ನದಿ. ಭಾರತಕ್ಕೆ ಗಂಗಾ ನದಿ ಹೇಗೋ ಈಜಿಪ್ಟ್​ಗೆ ನೈಲ್ ನದಿ ಇದೆ. ವಿಶ್ವದ ಅತಿದೊಡ್ಡ ನದಿಯೂ ಅದಾಗಿದೆ. ಹೀಗಾಗಿ, ಈಜಿಪ್ಟ್​ನ ಅತ್ಯುಚ್ಚ ನಾಗರಿಕ ಪ್ರಶಸ್ತಿಗೆ ನೈಲ್ ನದಿ ಹೆಸರು ಇಡಲಾಗಿದೆ.

ಕಳೆದ 9 ವರ್ಷಗಳಿಂದ ಮೋದಿ ಈ 13 ಪ್ರಶಸ್ತಿಗಳನ್ನು ಪಡೆದಿರುವುದಲ್ಲದೇ ಅಂತಾರಾಷ್ಟ್ರೀಯ ಸಂಘಟನೆಗಳಿಂದಲೂ ಪುರಸ್ಕಾರ ಗಿಟ್ಟಿಸಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದ ಅವಧಿಯಲ್ಲಿ ಪಡೆದ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

  1. ಈಜಿಪ್ಟ್: ಆರ್ಡರ್ ಆಫ್ ದಿ ನೈಲ್– 2023ರಲ್ಲಿ ಪ್ರಧಾನಿ ಮೋದಿಗೆ ಸಿಕ್ಕಿದೆ.
  2. ಪಪುವಾ ನ್ಯೂಗಿನಿಯಾ: ಕಂಪೇನಿಯನ್ ಆಫ್ ದಿ ಆರ್ಡರ್ ಆಫ್ ಲೋಗೋಹುಇದು ಆ ದೇಶದ ಅತ್ಯುಚ್ಚ ನಾಗರಿಕ ಪ್ರಶಸ್ತಿಯಾಗಿದೆ. ಪೆಸಿಫಿಕ್ ಐಲ್ಯಾಂಡ್ ದೇಶಗಳ ಒಗ್ಗಟ್ಟಿಗೆ ಕಾರಣರಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2023 ಮೇ ತಿಂಗಳಲ್ಲಿ ಈ ಪ್ರಶಸ್ತಿ ಸಿಕ್ಕಿತ್ತು.
  3. ಫಿಜಿ: ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ– 2023 ಮೇ ತಿಂಗಳಲ್ಲಿ ಮೋದಿಗೆ ಈ ಗೌರವ ಸಿಕ್ಕಿತು. ಮೋದಿ ಅವರ ಜಾಗತಿಕ ನಾಯಕತ್ವಕ್ಕೆ ಗೌರವವಾಗಿ ಫಿಜಿ ಅತ್ಯುನ್ನತ ಗೌರವ ಪ್ರಶಸ್ತಿ ಸಿಕ್ಕಿತು.
  4. ರಿಪಬ್ಲಿಕ್ ಆಫ್ ಪಲೋ: ಎಬಕಲ್ ಅವಾರ್ಡ್ಇದೂ ಕೂಡ 2023 ಮೇ ತಿಂಗಳಲ್ಲಿ ಮೋದಿಗೆ ಸಿಕ್ಕಿದೆ. ಪಪುವಾ ನ್ಯೂಗಿನಿಯಾ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಿಪಬ್ಲಿಕ್ ಆಫ್ ಪಲೋನ ಅಧ್ಯಕ್ಷ ಸುರೇಂಜಲ್ ಎಸ್ ವಿಪ್ಸ್ ಜೂನಿಯರ್ ಅವರು ಮೋದಿಗೆ ಈ ಪ್ರಶಸ್ತಿ ನೀಡಿದರು.
  5. ಆರ್ಡರ್ ಆಫ್ ಡ್ರುಕ್ ಗ್ಯಾಲ್​ಪೋ: ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು 2021 ಡಿಸೆಂಬರ್​ನಲ್ಲಿ ಮೋದಿಗೆ ಕೊಡಲಾಯಿತು.
  6. ಅಮೆರಿಕಲೆಜಿಯನ್ ಆಫ್ ಮೆರಿಟ್: ಇದನ್ನು ಅಸಾಧಾರಣ ಸಾಧನೆ ಮತ್ತು ಸೇವೆಗಳನ್ನು ಗುರುತಿಸಿ ಅಮೆರಿಕದ ಸಶಸ್ತ್ರ ಪಡೆ ಕೊಡುವ ಗೌರವವಾಗಿದೆ. 2020ರಲ್ಲಿ ಮೋದಿಗೆ ಇಂಥದ್ದೊಂದು ಅಪೂರ್ವ ಪ್ರಶಸ್ತಿ ಸಿಕ್ಕಿತ್ತು.
  7. ಬಹರೇನ್: ಕಿಂಗ್ ಹಮದ್ ಆರ್ಡರ್ ಆಫ್ ದಿ ರಿನೈಸಾನ್ಸ್: 2019ರಲ್ಲಿ
  8. ಮಾಲ್ಡೀವ್ಸ್: ಆರ್ಡರ್ ಆಫ್ ದಿ ಡಿಸ್ಟಿಂಗ್ಯುಶ್ಡ್ ರೂಲ್ ಅಫ್ ನಿಶಾನ್ ಇಜ್ಜುದ್ದೀನ್ಇದು ವಿದೇಶೀ ಗಣ್ಯರಿಗೆ ಕೊಡಗುವ ಅತ್ಯುನ್ನತ ಗೌರವವಾಗಿದೆ. ಮೋದಿಗೆ 2019ರಲ್ಲಿ ಇದು ದೊರಕಿದೆ.
  9. ರಷ್ಯಾ: ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ಅವಾರ್ಡ್ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಇದು 2019ರಲ್ಲಿ ಮೋದಿಗೆ ಸಿಕ್ಕಿದೆ.
  10. ಯುಎಇ: ಆರ್ಡರ್ ಆಫ್ ಝಾಯೆದ್ ಅವಾರ್ಡ್ಸಂಯುಕ್ತ ಅರಬ್ ಸಂಸ್ಥಾನದ ಅತ್ಯುನ್ನತ ನಾಗರಿಕ ಪ್ರಶಸ್ತಿ 2019ರಲ್ಲಿ ನರೇಂದ್ರ ಮೋದಿ ಅವರಿಗೆ ಲಭಿಸಿದೆ.
  11. ಗ್ರ್ಯಾಂಡ್ ಕಾಲರ್ ಆಫ್ ದಿ ಸ್ಟೇಟ್ ಆಫ್ ಪ್ಯಾಲಸ್ಟೀನ್ ಅವಾರ್ಡ್: 2018ರಲ್ಲಿ ಮೋದಿಗೆ ಇದು ಸಿಕ್ಕಿತು. ವಿದೇಶೀ ಗಣ್ಯರಿಗೆ ಪ್ಯಾಲಸ್ಟೀನ್ ದೇಶ ನೀಡುವ ಅತ್ಯುಚ್ಚ ಪ್ರಶಸ್ತಿ ಇದು.
  12. ಅಫ್ಘಾನಿಸ್ತಾನ: ಸ್ಟೇಟ್ ಆರ್ಡರ್ ಆಫ್ ಘಾಜಿ ಆಮಿರ್ ಅಮಾನುಲ್ಲಾ ಖಾನ್– 2016ರಲ್ಲಿ ಅಫ್ಘಾನಿಸ್ತಾನದ ಈ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನಿ ಮೋದಿಗೆ ದೊರಕಿತು.
  13. ಸೌದಿ ಅರೇಬಿಯಾ: ಆರ್ಡರ್ ಆಫ್ ಅಬ್ದುಲಜೀಜ್ ಅಲ್ ಸೌದ್– 2016ರಲ್ಲಿ ಸೌದಿ ಅರೇಬಿಯಾದ ಮುಸ್ಲಿಮೇತರರಿಗೆ ಕೊಡಲಾಗುವ ಅತ್ಯುನ್ನತ ಗೌರವ ನರೇಂದ್ರ ಮೋದಿಗೆ ಸಿಕ್ಕಿತು.

ಇದನ್ನೂ ಓದಿPM Modi Egypt Visit: ಪ್ರಧಾನಿ ಮೋದಿಗೆ ಈಜಿಪ್ಟ್​ನಲ್ಲಿ ಆರ್ಡರ್ ಆಫ್ ದಿ ನೈಲ್ ಗೌರವ

ಇತರ ಅಂತರರಾಷ್ಟ್ರೀಯ ಸಂಘಟನೆಗಳು ಮತ್ತು ಫೌಂಡೇಶನ್​ಗಳಿಂದ ಮೋದಿಗೆ ಸಿಕ್ಕ ಪ್ರಶಸ್ತಿಗಳು

  1. 2021ರಲ್ಲಿ ಗ್ಲೋಬಲ್ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಲೀಡರ್​ಶಿಪ್ ಅವಾರ್ಡ್; ಕೇಂಬ್ರಿಡ್ಜ್ ಎನರ್ಜಿ ರಿಸರ್ಚ್ ಅಸೋಸಿಯೇಟ್ಸ್ (ಸಿಇಆರ್​ಎ) ಈ ಪ್ರಶಸ್ತಿ ನೀಡಿತ್ತು.
  2. 2019ರಲ್ಲಿ ಗ್ಲೋಬಲ್ ಗೋಲ್​ಕೀಪರ್ ಅವಾರ್ಡ್: ಬಿಲ್ ಅಂಡ್ ಮೆಲಿಂಡಾ ಗೇಟ್ಸ್ ಫೌಂಡೇಶನ್ ಸ್ವಚ್ಛ ಭಾರತ್ ಅಭಿಯಾನಕ್ಕಾಗಿ ಈ ಪ್ರಶಸ್ತಿಯನ್ನು ಮೋದಿಗೆ ದಯಪಾಲಿಸಿತ್ತು.
  3. 2018ರಲ್ಲಿ ಚಾಂಪಿಯನ್ಸ್ ಆಫ್ ದಿ ಅರ್ತ್ ಅವಾರ್ಡ್ಇದು ವಿಶ್ವಸಂಸ್ಥೆ ಪರಿಸರ ರಕ್ಷಣೆ ಕಾರ್ಯಕ್ಕೆ ನೀಡುವ ಅತ್ಯುಚ್ಛ ಗೌರವ
  4. 2018ರಲ್ಲಿ ಸೋಲ್ ಪೀಸ್ ಪ್ರೈಜ್: ವಿಶ್ವಶಾಂತಿಗಾಗಿ ದೇಶಗಳ ನಡುವೆ ಬಾಂಧವ್ಯ ರೂಪಿಸಿದ ಮತ್ತು ಮನುಕುಲದ ಸಾಮರಸ್ಯತೆಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ಕೊರಿಯಾದ ಸೋಲ್ ಪೀಸ್ ಪ್ರೈಜ್ ಕಲ್ಚರಲ್ ಫೌಂಡೇಶನ್ ಸಂಸ್ಥೆ ಈ ಪ್ರಶಸ್ತಿ ನೀಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್