AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ […]

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?
KUSHAL V
|

Updated on:Aug 01, 2020 | 2:54 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ ಆಮಂತ್ರಣ ನೀಡಲಾಗಿದೆ.

ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಕಳೆದ ವಾರ ಲಕ್ನೋನಲ್ಲಿರುವ CBI ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸ್​ಗೆ ಹಾಜರಾಗಿದ್ದರು. ಜೊತೆಗೆ, ಈ ಪ್ರಕರಣದಲ್ಲಿ ಮುರಳಿ ಮನೋಹರ್​ ಜೋಶಿ ಹಾಗೂ ಉಮಾ ಭಾರತಿಯವರ ಹೆಸರು ಸಹ ತಳುಕು ಹಾಕಲಾಗಿತ್ತು.

ಆದರೆ, ಕೇಂದ್ರ ಸರ್ಕಾರದ ಕೊವಿಡ್​ ನಿಯಮಾವಳಿಯ ಪ್ರಕಾರ 65ಕ್ಕಿಂತ ಹೆಚ್ಚು ವಯೋಮಿತಿಯವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆಯಂತೆ. ಈ ಕಾರಣಕ್ಕಾಗಿ ಹಿರಿಯರಾದ ಅಡ್ವಾಣಿ (92) ಮತ್ತು ಜೋಶಿಗೆ (86) ಆಮಂತ್ರಣ ನೀಡಲಾಗಿಲ್ಲ ಎಂಬ ಮಾತೂ ಸಹ ಕೇಳಿಬಂದಿದೆ.

Published On - 2:49 pm, Sat, 1 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!