LK Advani Birthday: ಎಲ್‌ಕೆ ಅಡ್ವಾಣಿ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ಮನೆಗೆ ಭೇಟಿ ನೀಡಿದ್ದು, ಅದರ ಫೋಟೋಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ನವದೆಹಲಿ: ಇಂದು ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ (LK Advani Birthday) ಅವರ 95ನೇ ಜನ್ಮದಿನ. ಹೀಗಾಗಿ, ಎಲ್‌ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಡ್ವಾಣಿ ಅವರೊಂದಿಗೆ ಕೆಲ ಕಾಲ ಕಳೆದು, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅನೇಕ ಬಿಜೆಪಿ ನಾಯಕರು, ಇತರೆ ಪಕ್ಷಗಳ ರಾಜಕಾರಣಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಜನ್ಮದಿನಕ್ಕೆ ಶುಭ ಹಾರೈಸಿದ್ದಾರೆ.
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ಮನೆಗೆ ಭೇಟಿ ನೀಡಿದ್ದು, ಅದರ ಫೋಟೋಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಪ್ರಸ್ತುತ ಮಾಸ್ಕೋದಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಎಲ್‌ಕೆ ಅಡ್ವಾಣಿ ಅವರಿಗೆ ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ. “ಪೂಜ್ಯ ಎಲ್‌ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೇಶಕ್ಕೆ ನೀಡಿದ ಹಲವಾರು ಕೊಡುಗೆಗಳು ಮತ್ತು ಸೇವೆಗಳು ನಮಗೆ ಯಾವಾಗಲೂ ಸ್ಫೂರ್ತಿ ನೀಡುತ್ತವೆ” ಎಂದು ಬರೆದಿದ್ದಾರೆ.
Delhi | Prime Minister Narendra Modi visits the residence of senior BJP leader LK Advani to greet him on his birthday. pic.twitter.com/c6R7tFo4kU
— ANI (@ANI) November 8, 2022
ಗೃಹ ಸಚಿವ ಅಮಿತ್ ಶಾ ಕೂಡ ಅಡ್ವಾಣಿ ಅವರಿಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಗೌರವಾನ್ವಿತ ಎಲ್.ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಅವರು ಒಂದೆಡೆ ತಮ್ಮ ನಿರಂತರ ಪರಿಶ್ರಮದಿಂದ ದೇಶಾದ್ಯಂತ ಸಂಘಟನೆಯನ್ನು ಬಲಪಡಿಸಿದರೆ ಮತ್ತೊಂದೆಡೆ ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
#WATCH | Delhi: Prime Minister Narendra Modi visited the residence of veteran BJP leader LK Advani to greet him on his birthday.
(Source: DD) pic.twitter.com/CXGstXfcoU
— ANI (@ANI) November 8, 2022
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಟ್ವಿಟ್ಟರ್ನಲ್ಲಿ ಶುಭಾಶಯ ಕೋರಿದ್ದು, “ಬಿಜೆಪಿಯ ಪ್ರಮುಖ ದೀಪಗಳಲ್ಲಿ ಒಬ್ಬರಾದ ಎಲ್‌ಕೆ ಅಡ್ವಾಣಿ ಭಾರತದ ರಾಜಕೀಯ ಧೀಮಂತರು. ನಾನು ಕಂಡ ಅತ್ಯುತ್ತಮ ಮನುಷ್ಯರಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು” ಎಂದು ಹಾರೈಸಿದ್ದಾರೆ.
आदरणीय आडवाणीजी के आवास पर जाकर उन्हें जन्मदिवस की शुभकामनाएँ दीं। मैं भगवान से उनके अच्छे स्वास्थ्य और लम्बी आयु की कामना करता हूँ। pic.twitter.com/f5kWvMZCbN
— Rajnath Singh (@rajnathsingh) November 8, 2022
ಇದನ್ನೂ ಓದಿ: ಬಿಜೆಪಿ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಮತ್ತು ಕಿರಣ್ ರಿಜಿಜು ಕೂಡ ಭಾರತದ 7ನೇ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿಗೆ ಶುಭ ಹಾರೈಸಿದ್ದಾರೆ.
आदरणीय लालकृष्ण आडवाणी जी को जन्मदिन की हार्दिक शुभकामनाएं।
आडवाणी जी ने अपने सतत परिश्रम से एक ओर देशभर में संगठन को मजबूत किया तो वहीं दूसरी ओर सरकार में रहते हुए देश के विकास में अमूल्य योगदान दिया। ईश्वर से उनके उत्तम स्वास्थ्य व सुदीर्घ जीवन की कामना करता हूँ।
— Amit Shah (@AmitShah) November 8, 2022
ಆರ್‌ಎಸ್‌ಎಸ್‌ನ ಸದಸ್ಯರಾಗಿದ್ದ ಎಲ್‌ಕೆ ಅಡ್ವಾಣಿ ಬಿಜೆಪಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಬಿಜೆಪಿ ಹಿರಿಯ ನಾಯಕರಾಗಿರುವ ಅವರು 1990ರ ದಶಕದಲ್ಲಿ ಹಿಂದುತ್ವದ ರಾಜಕೀಯವನ್ನು ಮುಂಚೂಣಿಗೆ ತರಲು ಪ್ರಯತ್ನಿಸಿದವರಲ್ಲಿ ಒಬ್ಬರು.