LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಆರೋಗ್ಯ ಸ್ಥಿರ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 96 ವರ್ಷದ ಅಡ್ವಾಣಿ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನವದೆಹಲಿ: ಬುಧವಾರ ರಾತ್ರಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್ಕೆ ಅಡ್ವಾಣಿ) ಇಂದು (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಎಲ್ಕೆ ಅಡ್ವಾಣಿ ಅವರ ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
96 ವರ್ಷದ ಮಾಜಿ ಉಪಪ್ರಧಾನಿ ಎಲ್ಕೆ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 10.30ರ ಸುಮಾರಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿತ್ತು. “ಎಲ್ ಕೆ ಅಡ್ವಾಣಿ ಅವರು ಸ್ಥಿರವಾಗಿದ್ದಾರೆ. ಮೂತ್ರಶಾಸ್ತ್ರ, ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಅವರನ್ನು ಮೌಲ್ಯಮಾಪನ ಮಾಡುತ್ತಿದೆ” ಎಂದು ಮೂಲಗಳು ತಿಳಿಸಿತ್ತು.
ಇದನ್ನೂ ಓದಿ: PM Modi Russia Visit: ಜುಲೈನಲ್ಲಿ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ಇದೀಗ ಎಲ್ಕೆ ಅಡ್ವಾಣಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಅಡ್ವಾಣಿ ಅವರ ಕಾಯಿಲೆ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೇರುವ ಮೊದಲು ನರೇಂದ್ರ ಮೋದಿ ಅವರು ಎಲ್ಕೆ ಅಡ್ವಾಣಿ ಅವರನ್ನು ಭೇಟಿಯಾಗಿದ್ದರು.
#WATCH | Delhi: 96-year-old veteran BJP leader LK Advani discharged from AIIMS today. He was admitted here last night. pic.twitter.com/R06UOd7qef
— ANI (@ANI) June 27, 2024
ಜೂನ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ದಾಖಲೆಯ ಮೂರನೇ ಅವಧಿಗೆ ಕೇಂದ್ರದಲ್ಲಿ ಮುಂದಿನ ಸರ್ಕಾರವನ್ನು ರಚಿಸಲು ಹಕ್ಕು ಸಾಧಿಸುವ ಮೊದಲು ಅವರು ಭೇಟಿಯಾಗಿದ್ದರು. ಎನ್‌ಡಿಎ ಸಂಸದೀಯ ಪಕ್ಷದ ನಾಯಕರಾಗಿ, ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಲೋಕಸಭೆಯಲ್ಲಿ ಬಿಜೆಪಿ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಪ್ರಧಾನಿ ಮೋದಿ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು.
ಇದನ್ನೂ ಓದಿ: LK Advani Hospitalised: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
1927ರಲ್ಲಿ ನವೆಂಬರ್ 8ರಂದು ಕರಾಚಿಯಲ್ಲಿ (ಇಂದಿನ ಪಾಕಿಸ್ತಾನ) ಜನಿಸಿದ ಎಲ್ಕೆ ಅಡ್ವಾಣಿ 1942ರಲ್ಲಿ ಸ್ವಯಂಸೇವಕರಾಗಿ ಆರ್‌ಎಸ್‌ಎಸ್‌ಗೆ ಸೇರಿದರು. 1986ರಿಂದ 1990ರವರೆಗೆ ಅವರು ಬಿಜೆಪಿ ಅಧ್ಯಕ್ಷರಾಗಿ, ನಂತರ 1993ರಿಂದ 1998ರವರೆಗೆ ಮತ್ತು 2004ರಿಂದ 2005ರವರೆಗೆ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಉಪ ಪ್ರಧಾನಿಯಾಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ