LK Advani Health: ಬಿಜೆಪಿ ಮುಖಂಡ ಎಲ್ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ದೆಹಲಿಯ ಆಸ್ಪತ್ರೆಗೆ ದಾಖಲು
ಎಲ್ಕೆ ಅಡ್ವಾಣಿ ಅವರನ್ನು ಜೂನ್ 26ರಂದು ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾದ ಮರುದಿನವೇ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ನವದೆಹಲಿ: ಬಿಜೆಪಿ ಧುರೀಣ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (ಎಲ್ಕೆ ಅಡ್ವಾಣಿ) ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಎಮರ್ಜೆನ್ಸಿ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಎಲ್ಕೆ ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಇಂದು ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.
ಇದನ್ನೂ ಓದಿ: LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಆರೋಗ್ಯ ಸ್ಥಿರ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಳೆದ ವಾರವೂ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದದ್ ಎಲ್ಕೆ ಅಡ್ವಾಣಿ ಅವರನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ, ಜೂನ್ 26 ರಂದು ರಾತ್ರಿ 10.30 ರ ಸುಮಾರಿಗೆ ಅಡ್ವಾಣಿ ಅವರನ್ನು ಏಮ್ಸ್‌ಗೆ ದಾಖಲಿಸಲಾಯಿತು. ಅವರು ಮೂತ್ರಶಾಸ್ತ್ರ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಸಂಜೆ ಮತ್ತೆ ಅವರ ಆರೋಗ್ಯ ಬಿಗಡಾಯಿಸಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:54 pm, Wed, 3 July 24