LK Advani Birthday ಎಲ್ ಕೆ ಅಡ್ವಾಣಿ ಅವರಿಗೆ 94ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ, ಬಿಜೆಪಿ ನಾಯಕರಿಂದ ಶುಭ ಹಾರೈಕೆ

"ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸಲು ಅವರ ಹಲವಾರು ಪ್ರಯತ್ನಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ ಎಂದು ಮೋದಿ ಟ್ವೀಟ್.

LK Advani Birthday ಎಲ್ ಕೆ ಅಡ್ವಾಣಿ ಅವರಿಗೆ 94ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ, ಬಿಜೆಪಿ ನಾಯಕರಿಂದ ಶುಭ ಹಾರೈಕೆ
ಎಲ್.ಕೆ.ಅಡ್ವಾಣಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 08, 2021 | 11:53 AM

ದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಸುದೀರ್ಘ ಅವಧಿಯ ಅಧ್ಯಕ್ಷ ಎಲ್.ಕೆ.ಅಡ್ವಾಣಿ (LK Advani) ಸೋಮವಾರ 94ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವು ನಾಯಕರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದು ದೇಶ ಮತ್ತು ಪಕ್ಷಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು. “ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸಲು ಅವರ ಹಲವಾರು ಪ್ರಯತ್ನಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಅವರ ವಿದ್ವತ್ಪೂರ್ಣ ಅನ್ವೇಷಣೆಗಳು ಮತ್ತು ಶ್ರೀಮಂತ ಬುದ್ಧಿಶಕ್ತಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅಡ್ವಾಣಿ ಅವರನ್ನು ಸ್ಫೂರ್ತಿ ಮತ್ತು ಮಾರ್ಗದರ್ಶಕ ಎಂದು ಶ್ಲಾಘಿಸಿದರು. ಅವರ ಪಾಂಡಿತ್ಯ, ದೂರದೃಷ್ಟಿ ಮತ್ತು ಬುದ್ಧಿಶಕ್ತಿಯನ್ನು ಎಲ್ಲರೂ ಒಪ್ಪಿಕೊಳ್ಳುವ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಅವರನ್ನು ಪರಿಗಣಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಹಿರಿಯ ನಾಯಕರಾದ ಅಡ್ವಾಣಿ ಪಕ್ಷವನ್ನು ಜನಸಾಮಾನ್ಯರತ್ತ ಕೊಂಡೊಯ್ಯುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಅವರು ದೀರ್ಘಾಯುಷ್ಯ ಮತ್ತು ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದ ಅವರು, ಪಕ್ಷೇತರ ನಾಯಕ ಕೋಟ್ಯಂತರ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು.

80 ರ ದಶಕದ ಉತ್ತರಾರ್ಧದಲ್ಲಿ ರಾಮ ಜನ್ಮಭೂಮಿ ಆಂದೋಲನದೊಂದಿಗೆ ಮುನ್ನಲೆಗೆ ಬಂದ ಅಡ್ವಾಣಿ ಬಿಜೆಪಿಯ ಪ್ರಮುಖ ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಬೆಳವಣಿಗೆಯ ಪ್ರಮುಖ ವಾಸ್ತುಶಿಲ್ಪಿ. ಅಡ್ವಾಣಿ ಅವರು ಹಿಂದುತ್ವದ ರಾಜಕೀಯವನ್ನು ರೂಪಿಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ದಶಕಗಳ ಕಾಲ ಪಕ್ಷ ಮತ್ತು ಅದರ ಮುಂಚೂಣಿಯಲ್ಲಿರುವ ಜನಸಂಘವನ್ನು ಮುನ್ನಡೆಸಿದರು. ಅವಿಭಜಿತ ಭಾರತದಲ್ಲಿ ಕರಾಚಿಯಲ್ಲಿ ಜನಿಸಿದ ಅವರು ಆರ್‌ಎಸ್‌ಎಸ್ ಮತ್ತು ನಂತರ ಜನಸಂಘಕ್ಕೆ ಸೇರಿದರು.

ಇದನ್ನೂ ಓದಿ: Shri Ramayana Yatra ದೆಹಲಿಯಿಂದ ಶ್ರೀ ರಾಮಾಯಣ ಯಾತ್ರೆಯ ವಿಶೇಷ ರೈಲು ಆರಂಭಿಸಿದ ಐಆರ್​​ಸಿಟಿಸಿ; ದರ, ವೇಳಾಪಟ್ಟಿ ಇಲ್ಲಿವೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್