ವಾರಾಣಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವಿಫಲ, ಕಾರಣವೇನು?

ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯದ ಸಮೀಪವಿರುವ ಜ್ಞಾನವಾಪಿ ಮಸೀದಿ ವಿವಾದ ಮತ್ತಷ್ಟು ಜಟಿಲವಾಗಿದ್ದು, ಕೋರ್ಟ್ ಕಮಿಷನರ್​ಗಳಿಗೆ ಸಮೀಕ್ಷೆ ನಡೆಸಲು ಸ್ಥಳೀಯರು ಅವಕಾಶ ನೀಡದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಮಸೀದಿಯ ಸಮೀಕ್ಷೆ ನಡೆಸಲು ಸ್ಥಳೀಯ ನ್ಯಾಯಾಲಯ ನೇಮಿಸಿದ ವಕೀಲ ಅಜಯ್ ಕುಮಾರ್ ಹಾಗೂ ತಂಡ ವಿಫಲವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಾರಾಣಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವಿಫಲ, ಕಾರಣವೇನು?
ಜ್ಞಾನವಾಪಿ ಮಸೀದಿ
Follow us
TV9 Web
| Updated By: ನಯನಾ ರಾಜೀವ್

Updated on: May 08, 2022 | 11:50 AM

ವಾರಾಣಸಿ: ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯದ ಸಮೀಪವಿರುವ ಜ್ಞಾನವಾಪಿ ಮಸೀದಿ ವಿವಾದ ಮತ್ತಷ್ಟು ಜಟಿಲವಾಗಿದ್ದು, ಕೋರ್ಟ್ ಕಮಿಷನರ್​ಗಳಿಗೆ ಸಮೀಕ್ಷೆ ನಡೆಸಲು ಸ್ಥಳೀಯರು ಅವಕಾಶ ನೀಡದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಮಸೀದಿಯ ಸಮೀಕ್ಷೆ ನಡೆಸಲು ಸ್ಥಳೀಯ ನ್ಯಾಯಾಲಯ ನೇಮಿಸಿದ ವಕೀಲ ಅಜಯ್ ಕುಮಾರ್ ಹಾಗೂ ತಂಡ ವಿಫಲವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಕೆಂದರೆ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ವಕೀಲರು ನ್ಯಾಯಾಲಯದ ಆದೇಶವನ್ನು ವಿರೋಧಿಸಿದ್ದಾರೆ. ಸಮೀಕ್ಷೆ ಮಾಡಲು ಅಜಯ್ ಕುಮಾರ್ ಅವರನ್ನು ಬದಲಾಯಿಸುವಂತೆ ಒತ್ತಾಯಿಸಿ ಸಮಿತಿಯು ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯಕ್ಕೆ ಶನಿವಾರ ಅರ್ಜಿ ಸಲ್ಲಿಸಿದೆ.

ಸ್ಥಳೀಯ ಕೋರ್ಟ್ ಆದೇಶದಂತೆ ಮೇ 6 ಹಾಗೂ 7 ರಂದು ಈ ಮಸೀದಿಯಲ್ಲಿ ವಿಡಿಯೋ ಸಮೀಕ್ಷೆ ನಡೆಸಬೇಕಾಗಿತ್ತು. ಆದರೆ ಸ್ಥಳೀಯರ ವಿರೋಧದಿಂದಾಗಿ ಎರಡೂ ದಿನ ಸಮೀಕ್ಷೆ ಕಾರ್ಯ ನಡೆಸಲು ಸಾಧ್ಯವಾಗಿಲ್ಲ ಎಂಬುದು ತಿಳಿದುಬಂದಿದೆ. ದಿನದಾರಂಭದಲ್ಲೇ ವಾರಾಣಸಿ ಹೈಕೋರ್ಟ್ ಶನಿವಾರವೇ ವಿಡಿಯೋಗ್ರಫಿ ಮತ್ತು ಸಮೀಕ್ಷೆ ಮುಗಿಸಿ ಎಂದು ವಕೀಲರಿಗೆ ಸೂಚನೆ ನೀಡಿತ್ತು.

ಇದರಿಂದಾಗಿ ಭಾರಿ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿತ್ತು. ವಲೀಕರ ತಂಡ ಮಸೀದಿ ಬಳಿ ತೆರಳಿ ಸಮೀಕ್ಷೆಗೆ ಮುಂದಾಗಿತ್ತು. ಆದರೆ, ಸ್ಥಳೀಯರು ತೀವ್ರ ಪ್ರತಿರೋಧ ಉಂಟು ಮಾಡಿದ್ದರಿಂದ ಸಮೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಜ್ಞಾನವಾಪಿ ಮಸೀದಿಯ ಎರಡೂ ನೆಲಮಾಳಿಗೆಗಳನ್ನು ಸಹ ಸಮೀಕ್ಷೆ ನಡೆಸಲಾಗುವುದು, ಅದರಲ್ಲಿ ಒಂದು ನೆಲಮಾಳಿಗೆಯ ಕೀ ಆಡಳಿತದ ಬಳಿ ಮತ್ತು ಇನ್ನೊಂದರ ಕೀ ಮಸೀದಿಯ ನಿರ್ವಹಣೆಯಲ್ಲಿದೆ ಎಂದು ಹೇಳಲಾಗಿತ್ತು.

ಸಮೀಕ್ಷೆಗೆಂದು ಮಸೀದಿ ಸುತ್ತಮುತ್ತ ಬಿಗಿ ಭದ್ರತೆ ಜೊತೆಗೆ ಭದ್ರತಾ ಸಮಸ್ಯೆ ಹಿನ್ನಲೆ ಜ್ಞಾನವಾಪಿ ಸಂಕೀರ್ಣವನ್ನು ಹೋರ್ಡಿಂಗ್​​ಗಳಿಂದ ಮುಚ್ಚಲಾಗಿತ್ತು. ಈ ವಿಚಾರ ಮತ್ತೆ ನ್ಯಾಯಾಲಯದ ಮುಂದಿಟ್ಟಾಗ ನ್ಯಾಯಾಲಯವು ಮೇ 9 ರಂದು ತಮ್ಮ ವಾದವನ್ನು ಮಂಡಿಸಲು ಫಿರ್ಯಾದಿದಾರರು ಮತ್ತು ವಕೀಲ ಕಮಿಷನರ್‌ಗೆ ಸೂಚಿಸಿದೆ. ಹೀಗಾಗಿ ಸ್ಥಳ ಪರಿಶೀಲನೆ ಸದ್ಯಕ್ಕೆ ನಿಲ್ಲಿಸಲಾಗಿದೆ.

ಏನಿದು ಜ್ಞಾನವಾಪಿ ಮಸೀದಿ ವಿವಾದ ಜ್ಞಾನವಾಪಿ ಮಸೀದಿಯು ಹಿಂದೆ ಹಿಂದೂ ದೇಗುಲವಾಗಿದ್ದು, ಇಲ್ಲಿ ಶೃಂಗಾರ ಗೌರಿ ಪೂಜೆಗೆ ಅವಕಾಶ ನೀಡಬೇಕು ಎಂದು ವಾರಾಣಸಿ ಕೋರ್ಟ್​ನಲ್ಲಿ ಅರ್ಜಿ ದಾಖಲಾಗಿದೆ. 1998ರಲ್ಲಿಯೇ ಈ ಕುರಿತು ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ವಿವಾದ ಮುಂದುವರೆಯುತ್ತಲೇ ಇತ್ತು.

ಇತ್ತೀಚೆಗಷ್ಟೇ ವಾರಾಣಸಿ ದೇಗುಲ ಸಂಕೀರ್ಣ ನಿರ್ಮಾಣವಾಗಿದ್ದು, ಈ ವೇಳೆ ಮಸೀದಿಯ ಹಿಂಬದಿ ಎಲ್ಲರ ಕಣ್ಣಿಗೆ ಬಿದ್ದಿತ್ತು, ಮಸೀದಿಯ ಹಿಂದಿನ ಗೋಡೆ ದೇಗುಲದಂತೆಯೇ ಇದ್ದು, ಹೀಗಾಗಿ ಇಲ್ಲಿ ಶೃಂಗಾರ ಗೌರಿ ಪೂಜೆಗೆ ಅವಕಾಶ ಮಾಡಿಕೊಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಅಷ್ಟೇ ಅಲ್ಲದೆ ಈ ಮಸೀದಿಯು ವಾರಾಣಸಿ ದೇಗುಲ ಸಂಕೀರ್ಣಕ್ಕೆ ಹೊಂದಿಕೊಂಡಂತೆಯೇ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ