AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು

ನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದರು.

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು
ಅಗರ್ವಾಲ್ Image Credit source: NDTV
ನಯನಾ ರಾಜೀವ್
|

Updated on: Jun 19, 2026 | 7:47 AM

Share

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ, ಆತ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕಂದಕವು ಅತ್ಯಂತ ಆಳ ಹಾಗೂ ಕಡಿದಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರ ಸವಾಲಿನಿಂದ ಕೂಡಿತ್ತು. ಆದರೂ ರಕ್ಷಣಾ ತಂಡದ ಸದಸ್ಯರು ಹಗ್ಗಗಳ ಸಹಾಯದಿಂದ ಕಂದಕಕ್ಕೆ ಇಳಿದು, ಸಾಗರ್ ಅವರ ಮೃತದೇಹವನ್ನು ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಳೆಗಾಲದ ಸಮಯದಲ್ಲಿ ಕೋಟೆಗಳ ಮೇಲ್ಭಾಗದಲ್ಲಿ ಪಾಚಿ ಹಾಗೂ ಜಾರು ಇರುವುದರಿಂದ ಇಂತಹ ಚಾರಣದ ವೇಳೆ ಪ್ರವಾಸಿಗರು ತೀವ್ರ ಜಾಗರೂಕತೆ ವಹಿಸಬೇಕು ಮತ್ತು ಅಪಾಯಕಾರಿ ಅಂಚುಗಳಿಗೆ ಹೋಗಬಾರದು ಎಂದು ಸ್ಥಳೀಯ ಆಡಳಿತ ಮನವಿ ಮಾಡಿದೆ.

ಮತ್ತಷ್ಟು ಓದಿ: ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ಪೊಲೀಸರ ಪ್ರಕಾರ, ಕೇತನ್ ಅವರ ತಂದೆ ಉದ್ಯಮಿಯಾಗಿದ್ದು, ಪುಣೆ ಜಿಲ್ಲೆಯ ಲೋನಾವಾಲ ಬಳಿಯ ಮಲವಲಿಯ ಲೋಹಗಡ್ ಕೋಟೆಗೆ ತನ್ನ ಸ್ನೇಹಿತನೊಂದಿಗೆ ಚಾರಣಕ್ಕೆ ಹೋಗಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕಣಿವೆಗೆ ಜಾರಿದ್ದರು. ಮಾಹಿತಿ ಪಡೆದ ನಂತರ, ಪುಣೆ ಗ್ರಾಮೀಣ ಪೊಲೀಸರು ಸ್ಥಳೀಯ ನಿವಾಸಿಗಳು ಮತ್ತು ಶಿವದೃಗ್ ಮಿತ್ರ ಮತ್ತು ವನ್ಯಜೀವ್ ರಕ್ಷಕ್ ಮಾವಲ್ ಅವರ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಬಂದಿದ್ದರು

ಕೇತನ್ ಅವರ ದೇಹವನ್ನು ಕಣಿವೆಯಿಂದ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದ ನಂತರ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಲೋನಾವಾಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ವರದಿ ದಾಖಲಾಗಿದೆ. ತನ್ನ ಕೆಲವು ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಲೋಹಗಢ ಕೋಟೆಗೆ ಹೋಗಿದ್ದರು. ಹೆಚ್ಚಿನ ತನಿಖೆ ನಡೆಯುತ್ತಿದೆ.

ಕೇತನ್ ಮದುೆ ಇದೇ ವರ್ಷವೇ ನೆರವೇರಬೇಕಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ಹಠಾತ್ ಸಾವಿನಿಂದ ಅವರ ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ