AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಭದ್ರತಾ ಲೋಪ: ಸರ್ವಪಕ್ಷಗಳ ಸಭೆ ಕರೆದ ಸ್ಪೀಕರ್ ಓಂ ಬಿರ್ಲಾ

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ(Om Birla) ಸರ್ವಪಕ್ಷಗಳ ಸಭೆ(All Party Meeting) ಕರೆದಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯನ್ನು ಬುಧವಾರ ಸಂಜೆ 4 ಗಂಟೆಗೆ ಮುಂದೂಡಲಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಕರೆದಿರುವುದಾಗಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಭದ್ರತಾ ಲೋಪ: ಸರ್ವಪಕ್ಷಗಳ ಸಭೆ ಕರೆದ ಸ್ಪೀಕರ್ ಓಂ ಬಿರ್ಲಾ
ಸಂಸತ್
ನಯನಾ ರಾಜೀವ್
|

Updated on: Dec 13, 2023 | 3:57 PM

Share

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ(Om Birla) ಸರ್ವಪಕ್ಷಗಳ ಸಭೆ(All Party Meeting) ಕರೆದಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯನ್ನು ಬುಧವಾರ ಸಂಜೆ 4 ಗಂಟೆಗೆ ಮುಂದೂಡಲಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಕರೆದಿರುವುದಾಗಿ ತಿಳಿಸಿದ್ದಾರೆ.

ಇಬ್ಬರು ಜನರು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಸಭಾಂಗಣಕ್ಕೆ ಜಿಗಿದು ಸ್ಮೋಕ್​ ಕ್ರ್ಯಾಕರ್ ಹಚ್ಚಿದ್ದ ಪರಿಣಾಮ ಗ್ಯಾಲರಿ ತುಂಬಾ ಬಣ್ಣದ ಹೊಗೆ ತುಂಬಿಕೊಂಡಿತ್ತು.

ಬಿಜೆಪಿ ಸಂಸದರ ಪಾಸ್‌ಗಳನ್ನು ಬಳಸಿಕೊಂಡು ಇಬ್ಬರು ವ್ಯಕ್ತಿಗಳು ಆವರಣಕ್ಕೆ ಪ್ರವೇಶಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸದನದಲ್ಲಿ ಆರೋಪಿಸಿದ್ದಾರೆ.

ಇಬ್ಬರು 20 ವರ್ಷ ವಯಸ್ಸಿನ ಯುವಕರು ಇದ್ದಕ್ಕಿದ್ದಂತೆ ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಜಿಗಿದರು ಅವರ ಕೈಯಲ್ಲಿ ಡಬ್ಬಿ ಇತ್ತು. ಈ ಡಬ್ಬಿಗಳು ಹಳದಿ ಹೊಗೆಯನ್ನು ಹೊರಸೂಸುವಂಥದ್ದು. ಅವರಲ್ಲಿ ಒಬ್ಬರು ಸ್ಪೀಕರ್ ಕುರ್ಚಿಯತ್ತ ಓಡಲು ಪ್ರಯತ್ನಿಸುತ್ತಿದ್ದರು. ಅವರು ಕೆಲವು ಘೋಷಣೆಗಳನ್ನು ಕೂಗುತ್ತಿದ್ದರು.

ಮತ್ತಷ್ಟು ಓದಿ: ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ: ವೀಕ್ಷಕರ ಪಾಸ್​ ನಿಷೇಧಿಸಿದ ಸ್ಪೀಕರ್ ಓಂ ಬಿರ್ಲಾ

ಹೊಗೆ ವಿಷಕಾರಿಯಾಗಿರಬಹುದು ಎಂದಿದ್ದಾರೆ ಕಾರ್ತಿ ಚಿದಂಬರಂ. ಕೆಲವು ಸಂಸದರು ಸದನದಿಂದ ಹೊರಗೆ ಓಡಿದರೆ ಇನ್ನು ಕೆಲವರು ದಾಳಿಕೋರರ ಕಡೆಗೆ ಓಡಿ ಅವರನ್ನು ಹಿಡಿದಿದ್ದಾರೆ.

ಇಬ್ಬರು ವ್ಯಕ್ತಿಗಳನ್ನು ಹಿಡಿದ ಕಾಂಗ್ರೆಸ್ ಸಂಸದ ಗುರ್ಜೀತ್ ಸಿಂಗ್ ಔಜ್ಲಾ, ಅವರ ಕೈಯಲ್ಲಿ ಹಳದಿ ಬಣ್ಣದ ಹೊಗೆ ಹೊರಸೂಸುವ ಏನೋ ಇತ್ತು. ನಾನು ಅದನ್ನು ಕಿತ್ತು ಹೊರಗೆ ಎಸೆದೆ. ಇದು ಪ್ರಮುಖ ಭದ್ರತಾ ಲೋಪವಾಗಿದೆ ಎಂದಿದ್ದಾರೆ.

ಬುಧವಾರ ಮಧ್ಯಾಹ್ನ 1.02 ಗಂಟೆಗೆ ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಇಬ್ಬರು ಅಪರಿಚಿತರ ಹಳದಿ ಹೊಗೆಯನ್ನು ಹೊರಸೂಸುವ ಹೊಗೆ ಡಬ್ಬಿಗಳನ್ನು ಹೊತ್ತೊಯ್ದು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಲೋಕಸಭೆಯ ಸಭಾಂಗಣಕ್ಕೆ ನುಗ್ಗಿದ್ದು ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ