AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ , ಅಭಿಜಿತ್ ಗಂಗೋಪಾಧ್ಯಾಯ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಖಂಡರಾದ ಸುಭೇಂದು ಅಧಿಕಾರಿ, ಸುಕಾಂತ ಮಜುಂದಾರ್ ಮತ್ತು ಮಂಗಲ್ ಪಾಂಡೆ ಉಪಸ್ಥಿತರಿದ್ದರು.

ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ
ಅಭಿಜಿತ್
ನಯನಾ ರಾಜೀವ್
|

Updated on: Mar 07, 2024 | 4:04 PM

Share

ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸದಸ್ಯತ್ವವನ್ನು ಪಡೆದರು.

ಮಂಗಳವಾರ (ಮಾರ್ಚ್ 05) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಮಾರ್ಚ್ 7 ರಂದು ಬಿಜೆಪಿ ಸೇರುವುದಾಗಿ ಹೇಳಿದ್ದರು. ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿತ್ತು ಆದರೆ ಅದಕ್ಕೂ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ? ಬಿಜೆಪಿ ಸೇರಿದ ನಂತರ ಅಭಿಜಿತ್ ಗಂಗೋಪಾಧ್ಯಾಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ. ಈ ಬಗ್ಗೆ ಪತ್ರಕರ್ತರು ಅವರನ್ನು ಪ್ರಶ್ನಿಸಿದಾಗ ಅವರು ಯಾವುದೇ ಕ್ಷೇತ್ರದ ಹೆಸರನ್ನು ಹೇಳಲಿಲ್ಲ. ಆದರೆ ಅವರು ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ: ಕಲ್ಕತ್ತಾ ಹೈಕೋರ್ಟ್ ಜಡ್ಜ್ ಅಭಿಜಿತ್ ಗಂಗೋಪಾಧ್ಯಾಯ್ ರಾಜೀನಾಮೆ, ಬಿಜೆಪಿ ಸೇರ್ಪಡೆಗೆ ನಿರ್ಧಾರ

ಟಿಎಂಸಿ ಸವಾಲು ಎದುರಿಸಲಿದೆ ವಾಸ್ತವವಾಗಿ, ತಮ್ಲುಕ್ ಲೋಕಸಭಾ ಕ್ಷೇತ್ರವು ತೃಣಮೂಲ ಕಾಂಗ್ರೆಸ್ (TMC)ನ ಭದ್ರಕೋಟೆಯಾಗಿದೆ. ಟಿಎಂಸಿ ಅಭ್ಯರ್ಥಿ 2009 ರಿಂದ ನಿರಂತರವಾಗಿ ಈ ಸ್ಥಾನವನ್ನು ಗೆಲ್ಲುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಈ ಕ್ಷೇತ್ರದಿಂದ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಿದರೆ ಟಿಎಂಸಿಗೆ ಕಠಿಣ ಸವಾಲು ಎದುರಾಗಬಹುದು.

ಇದಕ್ಕೂ ಮೊದಲು ರಾಜೀನಾಮೆ ಸಲ್ಲಿಸುವಾಗ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದರು ಮತ್ತು ಮಮತಾ ಬ್ಯಾನರ್ಜಿ ಪಕ್ಷದ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಪ್ರಸ್ತಾಪಿಸಿದ್ದರು.

ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಸಹೋದ್ಯೋಗಿ ನ್ಯಾಯಮೂರ್ತಿ ಸೌಮೆನ್ ಸೇನ್ ರಾಜ್ಯದ ಆಡಳಿತ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣವೊಂದಕ್ಕೆ ಸಂಬಂಧಿಸಿದ ಸಾಕ್ಷ್ಯವನ್ನು ಸಿಬಿಐಗೆ ಸಲ್ಲಿಸುವ ಆದೇಶಕ್ಕೆ ನ್ಯಾಯಮೂರ್ತಿ ಸೌಮೆನ್ ಸೇನ್ ತಡೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ