Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಶಿವಸೇನೆಯು ಮುಂಬೈ ವಾಯುವ್ಯ ಕ್ಷೇತ್ರದಿಂದ ಬಾಲಿವುಡ್ ನಟ ಗೋವಿಂದರನ್ನು ಕಣಕ್ಕಿಳಿಸುವ ಸಾಧ್ಯತೆ

ಶಿವಸೇನೆ(ಶಿಂಧೆ ಬಣ)ಯು ಬಾಲಿವುಡ್ ನಟ ಗೋವಿಂದ ಅವರನ್ನು ಮುಂಬೈ ವಾಯವ್ಯ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಐದು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ನಟ ಭೇಟಿ ಮಾಡಿದ್ದರು. ಈ ಬಾರಿ ವಾಯವ್ಯ ಕ್ಷೇತ್ರದಿಂದ ಹಾಲಿ ಸಂಸದ ಗಜಾನನ ಕೀರ್ತಿಕರ್‌ಗೆ ಟಿಕೆಟ್ ನೀಡಲು ಶಿಂಧೆ ಬಣ ಸಿದ್ಧವಿಲ್ಲ. ನಟ ಗೋವಿಂದ 2004 ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಉತ್ತರ ಮುಂಬೈನಿಂದ ಸಂಸದರಾಗಿದ್ದರು.

Lok Sabha Election: ಶಿವಸೇನೆಯು ಮುಂಬೈ ವಾಯುವ್ಯ ಕ್ಷೇತ್ರದಿಂದ ಬಾಲಿವುಡ್ ನಟ ಗೋವಿಂದರನ್ನು ಕಣಕ್ಕಿಳಿಸುವ ಸಾಧ್ಯತೆ
ನಟ ಗೋವಿಂದ
Follow us
ನಯನಾ ರಾಜೀವ್
|

Updated on:Mar 22, 2024 | 2:29 PM

ಶಿವಸೇನೆ(ಶಿಂಧೆ ಬಣ)ಯು ಬಾಲಿವುಡ್ ನಟ ಗೋವಿಂದ(Govinda) ಅವರನ್ನು ಮುಂಬೈ ವಾಯವ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆ(Lok Sabha Election)ಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಐದು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ನಟ ಭೇಟಿ ಮಾಡಿದ್ದರು. ಈ ಬಾರಿ ವಾಯವ್ಯ ಕ್ಷೇತ್ರದಿಂದ ಹಾಲಿ ಸಂಸದ ಗಜಾನನ ಕೀರ್ತಿಕರ್‌ಗೆ ಟಿಕೆಟ್ ನೀಡಲು ಶಿಂಧೆ ಬಣ ಸಿದ್ಧವಿಲ್ಲ. ನಟ ಗೋವಿಂದ 2004 ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಉತ್ತರ ಮುಂಬೈನಿಂದ ಸಂಸದರಾಗಿದ್ದರು.

ಪಕ್ಷಗಳು ಒಂದರ ಹಿಂದೆ ಒಂದರಂತೆ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಈಗಾಗಲೇ ಲೋಕಸಭಾ ಚುನಾವಣೆಯ ಘೋಷಣೆಗಳಾಗಿವೆ. ಏಪ್ರಿಲ್ 19ರಿಂದ ಚುನಾವಣೆ ಆರಂಭವಾಗಲಿದ್ದು, ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ.

ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ಚುನಾವಣಾ ಆಯೋಗವು ಮಹಾರಾಷ್ಟ್ರದಲ್ಲಿ ಮೊದಲ, ಎರಡನೇ, ಮೂರನೇ, ನಾಲ್ಕು ಮತ್ತು ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದೆ. ಇದರಲ್ಲಿ ಮೊದಲ ಹಂತದಲ್ಲಿ

ಏಪ್ರಿಲ್ 19 ರಂದು 5 ಸ್ಥಾನಗಳು, ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು 8 ಸ್ಥಾನಗಳು, ಮೂರನೇ ಹಂತದಲ್ಲಿ ಮೇ 7 ರಂದು 11 ಸ್ಥಾನಗಳು, ನಾಲ್ಕನೇ ಹಂತದಲ್ಲಿ ಮೇ 13 ರಂದು 11 ಸ್ಥಾನಗಳು ಮತ್ತು ಐದನೇ ಹಂತದಲ್ಲಿ ಮೇ 20 ರಂದು ಹಂತ 13 ಸ್ಥಾನಗಳಲ್ಲಿ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ತಮಿಳುನಾಡು: 9 ಲೋಕಸಭಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬಿಜೆಪಿ; ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ

ಈ ಬಾರಿ ಮಹಾರಾಷ್ಟ್ರದಲ್ಲಿ ಮಹಾಯುತಿ ಮತ್ತು ಮಹಾವಿಕಾಸ್ ಅಘಾಡಿ ನಡುವೆ ಪ್ರಮುಖ ಸ್ಪರ್ಧೆ ನಡೆಯಲಿದೆ. ಮಹಾಯುತಿಯಲ್ಲಿ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ಒಟ್ಟಾಗಿವೆ. ಆದರೆ ಮಹಾವಿಕಾಸ್ ಅಘಾಡಿ ಶಿವಸೇನೆ ಯುಬಿಟಿ, ಎನ್‌ಸಿಪಿ ಶರದ್ ಪವಾರ್ ಮತ್ತು ಕಾಂಗ್ರೆಸ್ ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:20 pm, Fri, 22 March 24

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ