Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: ಕಾಂಗ್ರೆಸ್​ಗೆ​​​ ಮತ್ತೊಂದು ಹಿನ್ನಡೆ, ಬಿಜೆಪಿ ಸೇರಿದ ಮಾಜಿ ಸಚಿವ ಸುರೇಶ್ ಪಚೌರಿ

ಕಾಂಗ್ರೆಸ್​​​​ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್​​ನ ಹಿರಿಯ ನಾಯಕರು. ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್​​​ನ ಹಿರಿಯ ನಾಯಕ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಭೋಪಲ್​​ನಲ್ಲಿ ಬಿಜೆಪಿ ಪಕ್ಷವನ್ನು ಸೇರಿಸಿದ್ದಾರೆ.

Lok Sabha Election 2024: ಕಾಂಗ್ರೆಸ್​ಗೆ​​​ ಮತ್ತೊಂದು ಹಿನ್ನಡೆ, ಬಿಜೆಪಿ ಸೇರಿದ ಮಾಜಿ ಸಚಿವ ಸುರೇಶ್ ಪಚೌರಿ
ಬಿಜೆಪಿ ಸೇರಿದ ಮಾಜಿ ಸಚಿವ ಸುರೇಶ್ ಪಚೌರಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 09, 2024 | 4:30 PM

ಭೋಪಲ್, ಮಾ.9: ಲೋಕಸಭೆ ಚುನಾವಣೆ (Lok Sabha Election ) ಸಮೀಪಿಸುತ್ತಿದ್ದಂತೆ ಮಧ್ಯಪ್ರದೇಶ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತಿದೆ. ಇಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್​​​ನ ಹಿರಿಯ ನಾಯಕ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಭೋಪಲ್​​ನಲ್ಲಿ ಬಿಜೆಪಿ ಪಕ್ಷವನ್ನು ಸೇರಿಸಿದ್ದಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಸುರೇಶ್ ಪಚೌರಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಕಾಂಗ್ರೆಸ್​​​ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾಗಿದ್ದ, ಪಚೌರಿ ಅವರು ಕಾಂಗ್ರೆಸ್​​​​ ಸರ್ಕಾರಲ್ಲಿ ರಕ್ಷಣಾ (ರಕ್ಷಣಾ ಉತ್ಪಾದನೆ ಮತ್ತು ಸರಬರಾಜು) ರಾಜ್ಯ ಸಚಿವರಾಗಿದ್ದರು ಮತ್ತು ಪಕ್ಷದಿಂದ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಪಚೌರಿ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲಿ ಪಕ್ಷದ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.

ಇದನ್ನೂ ಓದಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಜತೆ ಮೈತ್ರಿ ಮಾಡಿಕೊಂಡ ನಟ ಕಮಲ್ ಹಾಸನ್

1998, 1999 ಮತ್ತು 2009ರ ಮೂರು ಅವಧಿಗೆ ಕಾಂಗ್ರೆಸ್​​​ನಿಂದ ಟಿಕೆಟ್‌ ಪಡೆದು, ಧಾರ್ (ಪರಿಶಿಷ್ಟ ಬುಡಕಟ್ಟುಗಳು) ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ರಾಜುಖೇಡಿ ಅವರು ಪ್ರಮುಖ ಬುಡಕಟ್ಟು ನಾಯಕರಾಗಿದ್ದರು. ಕಾಂಗ್ರೆಸ್‌ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Sat, 9 March 24