Lok Sabha Election 2024: ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಬಿಜೆಪಿ
ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾಆರಿ ಟಿಕೆಟ್ ನೀಡಿಲ್ಲ. ಉತ್ತರಪ್ರದೇಶದ ಕೈಸರ್‌ಗಂಜ್ ಲೋಕಸಭೆ ಕ್ಷೇತ್ರದಿಂದ ಕರಣ್ ಭೂಷಣ್ ಸಿಂಗ್ ಸ್ಪರ್ಧಿಸಲಿದ್ದಾರೆ.

ದೆಹಲಿ, ಮೇ.2: ಬ್ರಿಜ್ ಭೂಷಣ್ ಶರಣ್ಸಿಂಗ್ ( Brij Bhushan Sharan Singh) ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ಸಿಂಗ್ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್ ನೀಡಲಾಗಿತ್ತು. ಇನ್ನು ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ.
ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ಸಿಂಗ್ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿಲ್ಲ, ಗೃಹ ಸಚಿವ ಅಮಿತ್ ಶಾ ಲಕ್ನೋದಲ್ಲಿ ಈ ವಿಚಾರದ ಕುರಿತು ಬ್ರಿಜ್ ಭೂಷಣ್ ಅವರ ಬಳಿ ಚರ್ಚಿಸಲಿದ್ದು ಬ್ರಿಜ್ ಭೂಷಣ್ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವುದಾಗಿ ಚರ್ಚೆ ನಡೆದಿತ್ತು, ಇದೀಗ ಅದರಂತೆ ಅವರ ಮಗನಿಗೆ ಟಿಕೆಟ್ ನೀಡಲಾಗಿದೆ. ಇನ್ನು ಭಾರೀ ಚರ್ಚೆಯಲ್ಲಿರುವ ರಾಯ್ ಬರೇಲಿ ಲೋಕಸಭೆ ಕ್ಷೇತ್ರಕ್ಕೂ ಈ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿದೆ.
ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಜತೆಗೆ ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರೂ ಆಗಿದ್ದಾರೆ. ತಂದೆಯ ಮೇಲೆ ಆರೋಪ ಇದ್ದರ ಕಾರಣ ಈ ಭಾರೀ ಪಕ್ಷ ಅವರಿಗೆ ಟಿಕೆಟ್ ನೀಡಿಲ್ಲ, ಅವರ ಮಗನಿಗೆ ಲೋಕಸಭೆಯಲ್ಲಿ ಟಿಕೆಟ್ ನೀಡಿದೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ಗಿಲ್ಲ ಬಿಜೆಪಿ ಟಿಕೆಟ್
ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧೆ:
ಯೋಗಿ ಸರ್ಕಾರದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಈ ಬಾರಿ ಬಿಜೆಪಿಯಿಂದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಈ ಬಾರಿ ಬಿಜೆಪಿ ತನ್ನ ಶಕ್ತಿಪ್ರದರ್ಶನ ಮಾಡಲಿದೆ. 2019ರಲ್ಲಿ ಸೋನಿಯಾ ಗಾಂಧಿಯವರ ಬಿಜೆಪಿ ವಿರುದ್ಧ 1.6 ಲಕ್ಷ ಮತಗಳಲ್ಲಿ ಗೆಲುವು ಸಾಧಿಸಿದ್ದರು. ಮೇ 3 ರಂದು ರಾಯ್‌ಬರೇಲಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಫಿರೋಜ್ ಗಾಂಧಿ 1960 ರಿಂದ ಈ ಕ್ಷೇತ್ರದಿಂದಲ್ಲೇ ಸ್ಪರ್ಧಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:58 pm, Thu, 2 May 24