ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಜನವರಿ 17ರಂದು ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್ ಮಾತುಕತೆ
ಲೋಕಸಭೆ ಚುನಾವಣೆ ಹಿನ್ನೆಲೆ ಸೀಟು ಹಂಚಿಕೆ ಕುರಿತು ಜನವರಿ 17ರಂದು ಸಮಾಜವಾದಿ ಪಕ್ಷ(SP)ದೊಂದಿಗೆ ಕಾಂಗ್ರೆಸ್ ಸಭೆ ನಡೆಸಲಿದೆ. ದೆಹಲಿಯಲ್ಲಿರುವ ರಾಜ್ಯಸಭಾ ಸಂಸದ ಮುಕುಲ್ ವಾಸ್ನಿಕ್ ಅವರ ಮನೆಯಲ್ಲಿ ಸಭೆ ನಡೆಯಲಿದೆ. ಆದಾಗ್ಯೂ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ದೊಂದಿಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ನೇರ ಮಾತುಕತೆ ನಡೆಸುವುದಿಲ್ಲ. ಆರ್‌ಎಲ್‌ಡಿ ಜತೆಗಿನ ಮಾತುಕತೆ ಸಮಾಜವಾದಿ ಪಕ್ಷದ ಮೂಲಕ ನಡೆಯಲಿದೆ.

ಉತ್ತರ ಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು. ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾ ದಳ (ಎಸ್) 2019 ರಲ್ಲಿ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದಿತ್ತು ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.
ಕಾಂಗ್ರೆಸ್ ಪಕ್ಷಕ್ಕೆ ಸೀಟು ಹೊಂದಾಣಿಕೆಯನ್ನು ಘೋಷಿಸುವ ಮೊದಲು ಎಎಪಿಯೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ. ಏತನ್ಮಧ್ಯೆ, ಮುಂಬರುವ ಸಂಸತ್ತಿನ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆಯನ್ನು ಘೋಷಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.
ಮತ್ತಷ್ಟು ಓದಿ: Uttar Pradesh Politics: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಬಿಎಸ್‌ಪಿ, ಮೈತ್ರಿ ಇಲ್ಲ ಎಂದ ಮಾಯಾವತಿ
ಬಿಎಸ್‌ಪಿ ಏಕಾಂಗಿ ಸ್ಪರ್ಧೆ ಮುಂಬರಲಿರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ(Mayawati) ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.
ಮಾಯಾವತಿ ಅವರು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿ ಗೋಸುಂಬೆ ಎಂದು ಕರೆದಿದ್ದಾರೆ. ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.
ಮೈತ್ರಿ ಮಾಡಿಕೊಳ್ಳದೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರವು ದಿಟ್ಟ ಹೆಜ್ಜೆ ಎಂದೇ ಹೇಳಬಹುದು, ಇದು ವಿಶಿಷ್ಟವಾದ ಚುನಾವಣಾ ತಂತ್ರಕ್ಕೆ ವೇದಿಕೆಯನ್ನು ಸಿದ್ಧಪಡಿಸುವುದಂತೂ ಸತ್ಯ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ.
ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್‌ಪಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ