Lok Sabha Elections 2024: ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ, ಪ್ರತಿ ಧ್ವನಿಯೂ ಮುಖ್ಯ: ನರೇಂದ್ರ ಮೋದಿ
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಆರಂಭಗೊಂಡಿದ್ದು , ಪ್ರಧಾನಿ ನರೇಂದ್ರ ಮೋದಿ ಅವರು ಜನರು, ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುವಂತೆ ಒತ್ತಾಯಿಸಿದರು. ಇಂಗ್ಲಿಷ್, ಹಿಂದಿ, ತಮಿಳು, ಮರಾಠಿ, ಬೆಂಗಾಲಿ ಮತ್ತು ಅಸ್ಸಾಮಿ ಎಂಬ ಆರು ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭ, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಎಲ್ಲಾ ಸ್ಥಾನಗಳ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಮತದಾನದಲ್ಲಿ ಹೊಸ ದಾಖಲೆಯನ್ನು ರಚಿಸಬೇಕೆಂದು ನಾನು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.
ಪ್ರಥಮ ಬಾರಿಗೆ ಮತದಾನ ಮಾಡಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಅರುಣಾಚಲ ಪ್ರದೇಶ, ಸಿಕ್ಕಿಂ ಮುಂತಾದ ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿಯೂ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು; 108 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ
ಯಾವ ರಾಜ್ಯದ ಎಷ್ಟು ಕ್ಷೇತ್ರಗಳಲ್ಲಿ ಮತದಾನ?
ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ಎಂಟು, ಪಶ್ಚಿಮ ಬಂಗಾಳದಲ್ಲಿ ಮೂರು, ಮಹಾರಾಷ್ಟ್ರದಲ್ಲಿ ಐದು, ಛತ್ತೀಸ್‌ಗಢದಲ್ಲಿ ಒಂದು ಮತ್ತು ಮಣಿಪುರದಲ್ಲಿ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿದ್ದು, ಇಲ್ಲಿನ ಎಲ್ಲ ಸ್ಥಾನಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಯುತ್ತಿದೆ. ಇದಲ್ಲದೆ, ಉತ್ತರಾಖಂಡದ ಐದು, ಅರುಣಾಚಲ ಪ್ರದೇಶದ ಎರಡು, ಅಂಡಮಾನ್‌ನ ಒಂದು ಮತ್ತು ಲಕ್ಷದ್ವೀಪದ ಒಂದು ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.
ಮೋದಿ ಪೋಸ್ಟ್
The 2024 Lok Sabha elections commence today! As 102 seats across 21 States and UTs go to the polls, I urge all those voting in these seats to exercise their franchise in record numbers. I particularly call upon the young and first time voters to vote in large numbers. After all,…
— Narendra Modi (@narendramodi) April 19, 2024
ಮೇಘಾಲಯದಲ್ಲಿ ಎರಡು ಮತ್ತು ಮಿಜೋರಾಂ, ನಾಗಾಲ್ಯಾಂಡ್, ಪುದುಚೇರಿ ಮತ್ತು ಸಿಕ್ಕಿಂನಲ್ಲಿ ತಲಾ ಒಂದು ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ರಾಜಸ್ಥಾನದ 12, ಮಧ್ಯಪ್ರದೇಶದ 6, ಅಸ್ಸಾಂನ 5, ಬಿಹಾರದ 4, ತ್ರಿಪುರದ ಒಂದು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:51 am, Fri, 19 April 24