Lok Sabha Election 2024: ರಾಹುಲ್ ಗಾಂಧಿ ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

Rahul Gandhi Nomination: ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಅವರು 2024ರ ಲೋಕಸಭೆ ಚುನಾವಣೆಗೆ ಇಂದು(ಬುಧವಾರ)  ವಯನಾಡಿನಲ್ಲಿ  ನಾಮಪತ್ರ ಸಲ್ಲಿಸಲಿದ್ದಾರೆ. ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್‌ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ.ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

Lok Sabha Election 2024: ರಾಹುಲ್ ಗಾಂಧಿ ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ
ರಾಹುಲ್ ಗಾಂಧಿ
Image Credit source: The Economic Times

Updated on: Apr 03, 2024 | 9:26 AM

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಅವರು 2024ರ ಲೋಕಸಭೆ ಚುನಾವಣೆಗೆ ಇಂದು(ಬುಧವಾರ)  ವಯನಾಡಿನಲ್ಲಿ  ನಾಮಪತ್ರ ಸಲ್ಲಿಸಲಿದ್ದಾರೆ. ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್‌ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಈ ಕ್ಷೇತ್ರದಲ್ಲಿ ಮೂವರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆದಾಗ್ಯೂ, ಅನ್ನಿ ರಾಜಾ ಮತ್ತು ಕೆ ಸುರೇಂದ್ರನ್‌ಗಿಂತ ರಾಹುಲ್ ಗಾಂಧಿ ಹೆಚ್ಚು ಜನಪ್ರಿಯ ಮುಖ ಎಂದೇ ಹೇಳಬಹುದು.

ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕೆ ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ, 400 ದಾಟಲು ‘ಅಂಪೈರ್’ಗಳನ್ನು ಆಯ್ಕೆ ಮಾಡಿದ್ದಾರೆ ಪ್ರಧಾನಿ: ರಾಹುಲ್ ಗಾಂಧಿ

ಕೇರಳದಲ್ಲಿ ಚುನಾವಣೆ ಯಾವಾಗ?
ಕೇರಳದಲ್ಲಿ ಎರಡನೇ ಹಂತದ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದಹಾಗೆ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ 4.31 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.

ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು. ರಾಹುಲ್ ಗಾಂಧಿ ಅವರು 2004, 2009 ಮತ್ತು 2014 ರಲ್ಲಿ ಅಮೇಥಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Wed, 3 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us