AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024 : ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

Maharashtra: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಭಾಗಿಯಾದ ಹಾಗೂ ಮೊದಲ ಬಾರಿಗೆ ಮತದಾನ ಮಾಡಿದ ಎಲ್ಲರಿಗೂ ಧನ್ಯವಾಗಳು ಎಂದು ಹೇಳಿದ್ದಾರೆ. ಈ ಬಾರಿ ಮೊದಲ ಹಂತದ ಚುನಾವಣೆಯಲ್ಲಿ ಏಕ ಪಕ್ಷೀಯವಾಗಿ ಮತದಾನ ನಡೆದಿದೆ ಎಂದು ಹೇಳಿದರು.

Lok Sabha Election 2024 : ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Apr 20, 2024 | 12:22 PM

Share

ನಾಂದೇಡ್‌, ಏ.20: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election ) 2024 ಆರಂಭವಾಗಿದ್ದು ಶುಕ್ರವಾರ (ಏ.19) ಮೊದಲ ಹಂತದ ಮತದಾನ ಮುಕ್ತಯಗೊಂಡಿದೆ, ಇದೀಗ ಎಲ್ಲ ಪಕ್ಷಗಳು ಎರಡನೇ ಹಂತದ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ನಾಂದೇಡ್ ಪ್ರತಾಪ್ರರಾವ್ ಪಾಟೀಲ್ ಚಿಖ್ಲಿಕರ್ ಅವರ ಪರ ಮತಪ್ರಚಾರ ಮಾಡಿದ್ದಾರೆ.

ಸಭೆಯಲ್ಲಿ ಮೋದಿ, ನಿನ್ನೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಮತದಾನ ಮಾಡಿದ ಎಲ್ಲರಿಗೂ ಮತ್ತು ವಿಶೇಷವಾಗಿ ಮೊದಲ ಬಾರಿಗೆ ಮತದಾರರಿಗೆ ನಾನು ಅಭಿನಂದಿಸುತ್ತೇನೆ ಮತ್ತು ಕೃತಜ್ಞತೆ ಸಲ್ಲಿಸುತ್ತೇನೆ. ಮತದಾನ ಮುಗಿದ ನಂತರ ಬೂತ್ ಮಟ್ಟದಲ್ಲಿ ಮಾಡಿದ ವಿಶ್ಲೇಷಣೆ ಹಾಗೂ ಮಾಹಿತಿಗಳ ಪ್ರಕಾರ ಮೊದಲ ಹಂತದಲ್ಲಿ ಎನ್‌ಡಿಎಗೆ ಏಕಪಕ್ಷೀಯ ಮತದಾನವಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಮೇಥಿಯಂತೆ ಕಾಂಗ್ರೆಸ್ ವಯನಾಡಿನಲ್ಲೂ ತನ್ನ ನೆಲೆಯನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ನಾಂದೇಡ್‌ನಿಂದ ಮಹಾರಾಷ್ಟ್ರದ ಪರ್ಭಾನಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿಂದ ಕರ್ನಾಟಕದ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಚುನಾವಣಾ ರ್ಯಾಲಿಗಾಗಿ ಪ್ರಧಾನಿ ಮೋದಿ ಕರ್ನಾಟಕಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ

ಮೋದಿ ಬೆಂಗಳೂರಿನ ಉತ್ತರ, ಮಧ್ಯ, ದಕ್ಷಿಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲಿದ್ದಾರೆ. ಇಲ್ಲಿ ಮಹತ್ವದ ಪ್ರಚಾರವನ್ನು ಮೋದಿ ಮಾಡಲಿದ್ದಾರೆ. ಮಹಾರಾಷ್ಟ್ರ (ನಾಂದೇಡ್ ಮತ್ತು ಪರ್ಭಾನಿ) ಮತ್ತು ಕರ್ನಾಟಕ (ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ) ಎರಡೂ ರಾಜ್ಯದಲ್ಲೂ ಎರಡನೇ ಹಂತದ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 60ರಷ್ಟು ಮತದಾನ

2024 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾರರು ನೀಡಿದ ಪ್ರತಿಕ್ರಿಯೆ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಸಂತೋಷ ವ್ಯಕ್ತಪಡಿಸಿದರು. ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು ಇಂದಿನ ಮತದಾನದಿಂದ ನಾನು ಅತ್ಯುತ್ತಮ ಫಲಿತಾಂಶ ಪಡೆಯುತ್ತೇನೆ. ಭಾರತದಾದ್ಯಂತ ಜನರು ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಎಂದರು.

ಭಾರತದ ಚುನಾವಣಾ ಆಯೋಗದ ಪ್ರಕಾರ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ 102 ಲೋಕಸಭಾ ಕ್ಷೇತ್ರಗಳು ಮತ್ತು 92 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಚುನಾವಣೆಗಳಲ್ಲಿ ಸಂಜೆ 7 ಗಂಟೆಯವರೆಗೆ 60% ಕ್ಕಿಂತ ಹೆಚ್ಚು ಮತದಾನವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?