ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ

ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಯಾವ್ಯಾವ ಯೋಜನೆಗಳು ತಲುಪಿದೆ ಎನ್ನುವ ಮಾಹಿತಿ ಬೇಕಾ ಹಾಗಾದರೆ ಶ್ವೇಪತ್ರ.ಇನ್ ಲಾಗ್​ಇನ್ ಆಗಿ. ಪ್ರತಿ ರಾಜ್ಯದ ಎಲ್ಲಾ ಕ್ಷೇತ್ರಗಳ ಹೆಸರು ಆ ಕ್ಷೇತ್ರ ಕೇಂದ್ರ ಸರ್ಕಾರದ ಯೋಜನೆಯಿಂದ ಪಡೆದ ಲಾಭ ಎಲ್ಲವನ್ನೂ ವಿವರವಾಗಿ ನೀಡಲಾಗಿದೆ.

ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 16, 2024 | 10:51 AM

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಮತದಾರರ ಮನವೊಲಿಕೆಗೆ ನರೇಂದ್ರ ಮೋದಿ(Narendra Modi) ನೇತೃತ್ವದ ಎನ್​ಡಿಎ ಸರ್ಕಾರ, ಬಿಜೆಪಿಯು ಸಾಕಷ್ಟು ಕಸರತ್ತು ಮಾಡುತ್ತಿದೆ. ಇತ್ತೀಚೆಗಷ್ಟೇ ಮೋದಿ ಕರ್ನಾಟಕದ ಜನರ ಮನವೊಲಿಕೆಗಾಗಿ ನಮೋ ಇನ್ ಕನ್ನಡ ಎಂಬ ಟ್ವಿಟ್ಟರ್​ ಖಾತೆಯನ್ನು ಕೂಡ ತೆರೆದಿದ್ದಾರೆ. ಹಾಗೆಯೇ ಇದೀಗ ಶ್ವೇತಪತ್ರ.ಇನ್(Shwetapatra.in )ಮೂಲಕ ಜನರ ಬಳಿಗೆ ತಲುಪುವ ಕೆಲಸ ಮಾಡುತ್ತಿದೆ.

ಕ್ಷೇತ್ರವಾರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನರಿಗೆ ಹೇಗೆ ತಲುಪಿದೆ ಎನ್ನುವ ಮಾಹಿತಿಯನ್ನು ಈ ವೆಬ್​ಸೈಟ್​ ಮೂಲಕ ಪರಿಶೀಲಿಸಬಹುದು. ಕ್ಷೇತ್ರವಾರು ಮಾಹಿತಿಯನ್ನು ದಾಖಲಿಸಿ, ನಿಮ್ಮ ಕ್ಷೇತ್ರಕ್ಕೆ ಕೇಂದ್ರದಿಂದ ಎಷ್ಟು ಹಣ ಬಂದಿದೆ, ಯಾವ್ಯಾವ ಯೋಜನೆಗಳಲ್ಲಿ ಎಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿದೆ ಸೇರಿ ಮಾಹಿತಿಗಳನ್ನು ಶ್ವೇತಪತ್ರದ ಮೂಲಕ ಬಿಜೆಪಿ ಬಿಡುಗಡೆ ಮಾಡಿದೆ.

ಪ್ರತಿಪಕ್ಷಗಳು ಮೋದಿ ಸರ್ಕಾರ ಏನು ಮಾಡಿದೆ, ಯಾವ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂದು ಹೇಳುತ್ತಿರುವಾಗಲೇ ಬಿಜೆಪಿಯು ಈ ಶ್ವೇತಪತ್ರವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳು ಹಾಗೂ ಅದರಲ್ಲಿ ಮೋದಿ ಯೋಜನೆಗಳು ಎಷ್ಟು ಮಂದಿಗೆ ತಲುಪಿದೆ, ಯಾವ್ಯಾವ ಯೋಜನೆಯಿಂದ ಜನರು ಎಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಇನ್​ಫೋಗ್ರಾಫಿಕ್ಸ್​ ಮೂಲಕ ವಿವರಿಸಲಾಗಿದೆ. ಜತೆಗೆ ಮೋದಿ ನೀಡಿರುವ ಭರವಸೆಯ ವಿಡಿಯೋವನ್ನು ಕೂಡ ಅದರಲ್ಲಿ ಅಪ್​ಲೋಡ್​ ಮಾಡಲಾಗಿದೆ.

ಮತ್ತಷ್ಟು ಓದಿ: ನನ್ನ ನಿರ್ಧಾರ ದೇಶದ ಹಿತಕ್ಕಾಗಿ ಮಾತ್ರ, ಯಾರೂ ಭಯಪಡಬೇಕಿಲ್ಲ: ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26ರಿಂದ ಶುರುವಾಗಿ ಜೂನ್​ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ. ಪ್ರಧಾನಿ ಮೋದಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಪ್ರಚಾರ ಸಭೆಯನ್ನು ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Tue, 16 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್