Lok Sabha Election: ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಸಚಿವೆ ಸ್ಮೃತಿ ಇರಾನಿ

|

Updated on: Apr 29, 2024 | 2:44 PM

ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭಾ ಚುನಾವಣೆಗೆ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿದರು, ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಅಂದರೆ ಮೇ 20ರಂದು ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ಇರಾನಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು.

Lok Sabha Election: ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಸಚಿವೆ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Follow us on

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಪತಿ ಜುಬಿನ್ ಇರಾನಿ ಅವರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿದರು, ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಅಂದರೆ ಮೇ 20ರಂದು ಚುನಾವಣೆ ನಡೆಯಲಿದೆ.

ಈ ಸ್ಥಾನಕ್ಕೆ ಇರಾನಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಈ ಕ್ಷೇತ್ರಕ್ಕೆ ಕಾಂಗ್ರೆಸ್​ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿವೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾನುವಾರ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಹನುಮಾನ್​ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮೇಥಿ ನಿವಾಸಿಗಳ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.
ರಾಹುಲ್ ಅವರನ್ನು 55000 ಮತಗಳ ಅಂತರದಿಂದ ಸೋಲಿಸಿದ್ದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಮತ್ತೊಮ್ಮೆ ಇರಾನಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದೆ. 2019ರಲ್ಲಿ ಇರಾನಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು 55,000 ಮತಗಳ ಅಮತರದಿಂದ ಸೋಲಿಸಿದ್ದರು. ಅಮೇಥಿಯಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ, ಅಮೇಥಿಯಲ್ಲಿ ಐದನೇ ಹಂತದ ಮತದಾನ ಮೇ20ರಂದು ನಡೆಯಲಿದೆ.

ಆದರೆ ಇದುವರೆಗೆ ಕಾಂಗ್ರೆಸ್​ ಅಮೇಥಿ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್​ ವಾದ್ರಾ ಈ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳು ಕೂಡ ಕೇಳಿಬಂದಿತ್ತು. ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇದ್ದು ಅಷ್ಟರೊಳಗೆ ಸಂಪೂರ್ಣ ಚಿತ್ರಣ ಸಿಗಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ