AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ 40, ಬಿಹಾರದ 12 ಸೀಟುಗಳ ಮೇಲೆ ಕಾಂಗ್ರೆಸ್​ ಕಣ್ಣು

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್​ ಚರ್ಚೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಉತ್ತರಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳ ಪೈಕಿ 40 ಸ್ಥಾನಗಳಿಗೆ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ಬಲಿಷ್ಠ ಚುನಾವಣಾ ತಂತ್ರಗಾರಿಕೆಗೆ ಸಜ್ಜಾಗಿದೆ . ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 10 ರಿಂದ 12 ಸ್ಥಾನಗಳಲ್ಲಿ ಸ್ಪರ್ಧಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಕಾಂಗ್ರೆಸ್ ಹೊಂದಿದೆ.

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ 40, ಬಿಹಾರದ 12 ಸೀಟುಗಳ ಮೇಲೆ ಕಾಂಗ್ರೆಸ್​ ಕಣ್ಣು
ರಾಹುಲ್ ಗಾಂಧಿImage Credit source: Udayavani
ನಯನಾ ರಾಜೀವ್
|

Updated on: Jan 04, 2024 | 8:50 AM

Share

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ(Lok Sabha Election) ಘೋಷಣೆಯಾಗಲಿದೆ. ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್​ ಚರ್ಚೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಉತ್ತರಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳ ಪೈಕಿ 40 ಸ್ಥಾನಗಳಿಗೆ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ಬಲಿಷ್ಠ ಚುನಾವಣಾ ತಂತ್ರಗಾರಿಕೆಗೆ ಸಜ್ಜಾಗಿದೆ . ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 10 ರಿಂದ 12 ಸ್ಥಾನಗಳಲ್ಲಿ ಸ್ಪರ್ಧಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಕಾಂಗ್ರೆಸ್ ಹೊಂದಿದೆ.

ಕಾಂಗ್ರೆಸ್ ತಾನು ಪ್ರಬಲ ಮತ್ತು ಸ್ಪರ್ಧಾತ್ಮಕ ಸ್ಥಾನವನ್ನು ಹೊಂದಿದೆ ಎಂದು ನಂಬಿರುವ ಕ್ಷೇತ್ರಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 40 ಸ್ಥಾನಗಳ ಪಟ್ಟಿಯನ್ನು ಗುರುವಾರ ನಡೆಯಲಿರುವ ಕಾಂಗ್ರೆಸ್​ ಸಭೆಯಲ್ಲಿ ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ಯುಪಿಯಲ್ಲಿ ಕಾಂಗ್ರೆಸ್ ಪರಿಗಣಿಸುತ್ತಿರುವ ಸ್ಥಾನಗಳು:

ಅಮ್ರೋಹಾ ಸಹರಾನ್ಪುರ್ ಲಖಿಂಪುರ ಖಿರಿ ಬಿಜ್ನೋರ್ ಮೊರಾದಾಬಾದ್ ಲಕ್ನೋ ರಾಯ್ಬರೇಲಿ ಅಮೇಥಿ ಬಾರಾಬಂಕಿ ಸಮಾಜವಾದಿ ಪಕ್ಷಕ್ಕೆ ಅನುಕೂಲಕರ ಕ್ಷೇತ್ರವಾಗಿರುವ ಗಮನಾರ್ಹ ಅಲ್ಪಸಂಖ್ಯಾತ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.

ಅಂತೆಯೇ, ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 10 ರಿಂದ 12 ಸ್ಥಾನಗಳಲ್ಲಿ ಸ್ಪರ್ಧಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಕಾಂಗ್ರೆಸ್ ಹೊಂದಿದೆ.

ಬಿಹಾರ

ಕತಿಹಾರ್ ಕಿಶನ್‌ಗಂಜ್ ಪೂರ್ಣಿಯಾ/ಕಟಿಹಾರ್ (ಒಂದಾದರೂ) ಔರಂಗಾಬಾದ್ ಭಾಗಲ್ಪುರ ಬಕ್ಸರ್ ಸಸಾರಂ ಮೋತಿಹಾರಿ/ವಾಲ್ಮೀಕಿನಗರ (ಯಾವುದೋ ಒಂದು) ನಾವಡ ಪಾಟ್ನಾ

ಕಾಂಗ್ರೆಸ್ ಪಕ್ಷದ ಆಯಾ ರಾಜ್ಯಗಳ ಅಧ್ಯಕ್ಷರು, ಉಸ್ತುವಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಉನ್ನತ ನಾಯಕತ್ವದ ನಿರ್ಣಾಯಕ ಸಭೆ ನಡೆಸುತ್ತಿದೆ.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 11 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ, ಏನಿದರ ಮರ್ಮ?

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಭಾಗವಹಿಸಲಿದ್ದಾರೆ. ಡಿಸೆಂಬರ್‌ನಲ್ಲಿ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬಳಿಕ ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಮೊದಲ ಸಭೆ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!