AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಚುನಾವಣೆಯಲ್ಲಿ ಗೆದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸ್ತೇವೆ: ಮಾಯಾವತಿ

ಒಂದೊಮ್ಮೆ ನಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಲಾಗುವುದು ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಾಗಿ ಮಾಯಾವತಿ ಘೋಷಿಸಿದ್ದಾರೆ. ನಮ್ಮ ಪಕ್ಷ ಕೆಲಸ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ ಹಾಗಾಗಿ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮಾಯಾವತಿ ಹೇಳಿದರು.

Lok Sabha Elections 2024: ಚುನಾವಣೆಯಲ್ಲಿ ಗೆದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸ್ತೇವೆ: ಮಾಯಾವತಿ
ಮಾಯಾವತಿImage Credit source: Business Standard
ನಯನಾ ರಾಜೀವ್
|

Updated on:Apr 15, 2024 | 9:24 AM

Share

ಒಂದೊಮ್ಮೆ ನಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಲಾಗುವುದು ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ(Mayawati) ಹೇಳಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಾಗಿ ಮಾಯಾವತಿ ಘೋಷಿಸಿದ್ದಾರೆ. ನಮ್ಮ ಪಕ್ಷ ಕೆಲಸ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ ಹಾಗಾಗಿ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮಾಯಾವತಿ ಹೇಳಿದರು.

ಉತ್ತರ ಪ್ರದೇಶದಲ್ಲಿ ನನ್ನ ನೇತೃತ್ವದಲ್ಲಿ 4 ಬಾರಿ ಸರ್ಕಾರ ರಚನೆಯಾಗಿದೆ, ನಮ್ಮ ಸರ್ಕಾರದಲ್ಲಿ ಯಾವುದೇ ಕೋಮುಗಲಭೆಗಳು ಇರಲಿಲ್ಲ, ಆದರೆ ಎಸ್‌ಪಿ ಸರ್ಕಾರದಲ್ಲಿ, ಜಾಟ್ ಮತ್ತು ಮುಸ್ಲಿಂ ಸಮುದಾಯಗಳನ್ನು ಪರಸ್ಪರ ಹೊಡೆದಾಡುವಂತೆ ಮಾಡಲಾಯಿತು.

ಇಲ್ಲಿ ತೀರಾ ಹಿಂದುಳಿದ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಿ ಈ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮತ್ತು ಜಾಟ್ ಸಮುದಾಯದ ನಡುವೆ ಭಾಂದವ್ಯ ಮೂಡಿಸಿದ್ದೇವೆ. ನಾನು ಮುಜಾಫರ್‌ನಗರದಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಯಸಿದ್ದೆ ಆದರೆ ಮುಸ್ಲಿಂ ಸಮುದಾಯದಿಂದ ಯಾರೂ ಸ್ಪರ್ಧಿಸಲು ಸಿದ್ಧರಿರಲಿಲ್ಲ.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರ ಮೊದಲ ರ್ಯಾಲಿ ಇದಾಗಿದ್ದು, ಈ ರ್ಯಾಲಿಯ ಮೂಲಕ ಅವರು ವಿರೋಧ ಪಕ್ಷಗಳನ್ನು ಗುರಿಯಾಗಿಸಿದ್ದಾರೆ. ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಬಿಜೆಪಿ ಈಗ ಯುಪಿಯಲ್ಲಿ ಚುನಾವಣಾ ಕಣಕ್ಕೆ ಸಂಪೂರ್ಣವಾಗಿ ಪ್ರವೇಶಿಸಿದೆ. ಯುಪಿಯ 80 ಸ್ಥಾನಗಳಲ್ಲಿ ಬಿಎಸ್‌ಪಿ ಏಕಾಂಗಿಯಾಗಿದ್ದು, ಮಾಯಾವತಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ 2024 ರ ಮೊದಲ ಹಂತವು ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ಕೊನೆಯ ಹಂತದ ಮತದಾನವು ಜೂನ್ 1, 2024 ರಂದು ನಡೆಯಲಿದೆ. ಮತಗಳ ಎಣಿಕೆಯು ಜೂನ್ 4, 2024 ರಂದು ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:24 am, Mon, 15 April 24