Lok Sabha Election: ಲೋಕಸಭಾ ಚುನಾವಣೆ: 90 ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧಪಡಿಸಿದ ಬಿಜೆಪಿ

ದೆಹಲಿಯಲ್ಲಿ ಸೋಮವಾರ ತಡರಾತ್ರಿ ಬಿಜೆಪಿ ನಡೆಸಿದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ 90 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದೇ ಬಿಜೆಪಿಯು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇದ್ದರು. ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಬಿಹಾರ, ಹಮಾಚಲ ಪ್ರದೇಶ ಹಾಗೂ ತೆಲಂಗಾಣದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ

Lok Sabha Election: ಲೋಕಸಭಾ ಚುನಾವಣೆ: 90 ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧಪಡಿಸಿದ ಬಿಜೆಪಿ
ನರೇಂದ್ರ ಮೋದಿ-ಅಮಿತ್ ಶಾImage Credit source: The Print
Follow us
ನಯನಾ ರಾಜೀವ್
|

Updated on:Mar 12, 2024 | 10:41 AM

ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ಚುನಾವಣಾ ಸಮಿತಿಯು ಲೋಕಸಭಾ ಚುನಾವಣೆ(Lok Sabha Election)ಗೆ 90 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸಿದ್ಧಪಡಿಸಿದ್ದು ಇಂದೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ ಶೀಘ್ರದಲ್ಲೇ ಅಧಿಕೃತ ಘೋಷಣೆ ನಿರೀಕ್ಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಈ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು. ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಪ್ರಹ್ಲಾದ್ ಜೋಶಿ, ನಿತ್ಯಾನಂದ್ ರೈ ಹಾಗೂ ಪಕ್ಷದ ಸಂಸದರು ಮತ್ತು ವಿವಿಧ ರಾಜ್ಯಗಳ ಮುಖಂಡರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಚರ್ಚೆಗಳು ಪ್ರಾಥಮಿಕವಾಗಿ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ , ಕರ್ನಾಟಕ, ಬಿಹಾರ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದ ಲೋಕಸಭಾ ಸ್ಥಾನಗಳ ಮೇಲೆ ಕೇಂದ್ರೀಕೃತವಾಗಿವೆ. ಬಿಹಾರ, ತಮಿಳುನಾಡು ಮತ್ತು ಒಡಿಶಾದಲ್ಲಿ ನಡೆಯುತ್ತಿರುವ ಮಾತುಕತೆಗಳಿಂದಾಗಿ ಈ ರಾಜ್ಯಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಬಹುದು.

ಗುಜರಾತ್‌ನ 11 ಸ್ಥಾನಗಳಲ್ಲಿ ಈಗಾಗಲೇ ಏಳು ಸ್ಥಾನಗಳಿಗೆ ಹೆಸರುಗಳನ್ನು ನಿರ್ಧರಿಸಲಾಗಿದೆ. ಮಧ್ಯಪ್ರದೇಶದಲ್ಲಿ ಉಳಿದ ಐದು ಸ್ಥಾನಗಳ ಪೈಕಿ ನಾಲ್ಕರಲ್ಲಿ ಒಮ್ಮತ ಮೂಡಿದೆ. ಮಹಾರಾಷ್ಟ್ರದಲ್ಲಿ 25, ತೆಲಂಗಾಣದಲ್ಲಿ ಎಂಟು ಮತ್ತು ಕರ್ನಾಟಕದ ಎಲ್ಲಾ 28 ಸ್ಥಾನಗಳಿಗೆ ಚರ್ಚೆಗಳು ನಡೆದಿವೆ. ಮೂಲಗಳ ಪ್ರಕಾರ ಕರ್ನಾಟಕದಲ್ಲಿ ಜೆಡಿಎಸ್ ಮೂರು ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಹೆಚ್ಚುವರಿಯಾಗಿ, ಹಿಮಾಚಲ ಪ್ರದೇಶದ ಎಲ್ಲಾ ನಾಲ್ಕು ಸ್ಥಾನಗಳಿಗೆ ಮಾತುಕತೆ ನಡೆಸಲಾಯಿತು.

ಮತ್ತಷ್ಟು ಓದಿ: Lok Sabha Elections 2024: 8 ದಿನಗಳಲ್ಲಿ ಕರ್ನಾಟಕದ ನಾಲ್ಕು ಕಡೆ ಪ್ರಧಾನಿ ಮೋದಿ ರ‍್ಯಾಲಿ

ವಿವಿಧ ರಾಜ್ಯಗಳಲ್ಲಿ ಜೆಡಿಯು, ಲೋಕ ಜನಶಕ್ತಿ ಪಕ್ಷ, ಎಐಎಡಿಎಂಕೆ, ಜೆಜೆಪಿ, ಮತ್ತು ಬಿಜೆಡಿಯಂತಹ ಪಕ್ಷಗಳೊಂದಿಗೆ ಸೀಟು ಹಂಚಿಕೆ ಸಂಬಂಧ ಇನ್ನೂ ಅಂತಿಮಗೊಂಡಿಲ್ಲ.

ಲೋಕಸಭೆ ಚುನಾವಣೆಗೆ ಮಾರ್ಚ್ 2 ರಂದು ಬಿಜೆಪಿ ತನ್ನ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಪ್ರಧಾನಿ ನರೇಂದ್ರ ಮೋದಿ  ವಾರಾಣಸಿಯಿಂದ ಮರು ಆಯ್ಕೆ ಬಯಸಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 303 ಸ್ಥಾನಗಳನ್ನು ಗೆದ್ದು, ವಿರೋಧ ಪಕ್ಷಕ್ಕಿಂತ ಗಮನಾರ್ಹ ಮುನ್ನಡೆ ಸಾಧಿಸಿದೆ. ಮುಂಬರುವ ಲೋಕಸಭೆ ಚುನಾವಣೆಯು ಈ ವರ್ಷದ ಏಪ್ರಿಲ್ ಮತ್ತು ಮೇ ನಡುವೆ ನಡೆಯುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Tue, 12 March 24

ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ