AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ ಬಿಜೆಪಿ, ಮೊದಲ ಪಟ್ಟಿಯಲ್ಲಿ ಯಾರ್ಯಾರ ಹೆಸರು?

ಬಿಜೆಪಿ, ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ದೆಹಲಿಯಲ್ಲಿ ಸಭೆ ನಡೆಸಲಿವೆ, ಈ ಸಭೆಯಲ್ಲಿ ಸಭೆಯಲ್ಲಿ ಕನಿಷ್ಠ 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿವೆ. ಪಕ್ಷವು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಇಂದು 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ ಬಿಜೆಪಿ, ಮೊದಲ ಪಟ್ಟಿಯಲ್ಲಿ ಯಾರ್ಯಾರ ಹೆಸರು?
ಮೋದಿ
Follow us
ನಯನಾ ರಾಜೀವ್
|

Updated on: Feb 29, 2024 | 11:23 AM

ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ದೆಹಲಿಯಲ್ಲಿ ಸಭೆ ಸೇರಲಿದ್ದು, ಕನಿಷ್ಠ 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇಂದು ಪಕ್ಷವು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ವಿವಿಐಪಿ ಅಭ್ಯರ್ಥಿಗಳ ಹೊರತಾಗಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೆಲವು ಕೇಂದ್ರ ಸಚಿವರ ಹೆಸರನ್ನು ಸಹ ಪಟ್ಟಿ ಹೊಂದಿರಬಹುದು. ಇಂದು ರಾತ್ರಿ ಅಭ್ಯರ್ಥಿಗಳನ್ನು ಘೋಷಿಸಬಹುದಾದ ಇತರ ಸ್ಥಾನಗಳು, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಫಲವಾದ ಸ್ಥಳಗಳನ್ನು ಒಳಗೊಂಡಿದೆ.

ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಆರು ರಾಜ್ಯಗಳ ಕೋರ್ ಗ್ರೂಪ್ ಕಮಿಟಿಗಳೊಂದಿಗೆ ಬುಧವಾರ ನಡೆದ ಸಭೆಯ ನಂತರ ಇಂದಿನ ನಿರ್ಣಾಯಕ ಸಭೆ ನಡೆಯುತ್ತದೆ, ಅಲ್ಲಿ ನಡ್ಡಾ ಅವರು ಆ ಲೋಕಸಭಾ ಸ್ಥಾನಗಳ ರಾಜ್ಯ ನಾಯಕರಿಂದ ಅಭಿಪ್ರಾಯಗಳನ್ನು ಕೇಳಿದರು.

ಮತ್ತಷ್ಟು ಓದಿ: Lok Sabha Election: ಮಹಾರಾಷ್ಟ್ರದ 26 ಲೋಕಸಭಾ ಸ್ಥಾನಗಳಲ್ಲಿ ಪ್ರಕಾಶ್​ ಅಂಬೇಡ್ಕರ್ ನೇತೃತ್ವದ ಪಕ್ಷ ಸ್ಪರ್ಧೆ

ಇಂದು ಪಕ್ಷದ ಸಿಇಸಿ ಸಭೆಯ ಹೊರತಾಗಿ, ನಡ್ಡಾ ಅವರು ಯುಪಿಯಿಂದ ಪಕ್ಷದ ಕೋರ್ ಗ್ರೂಪ್ ಕಮಿಟಿಯನ್ನು ಭೇಟಿಯಾಗಲಿದ್ದಾರೆ, ಅಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಇಬ್ಬರೂ ಉಪ ಮುಖ್ಯಮಂತ್ರಿಗಳು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರು ದೆಹಲಿಯಲ್ಲಿ ಸಂಜೆ 7 ಗಂಟೆಗೆ ಉಪಸ್ಥಿತರಿರುವ ನಿರೀಕ್ಷೆಯಿದೆ.

ಇಂದಿನ ಸಭೆಗೂ ಮುನ್ನ ಬಿಜೆಪಿ ಬುಧವಾರ ಲೋಕಸಭೆ ಚುನಾವಣೆಗೆ ಹಲವು ರಾಜ್ಯಗಳಲ್ಲಿ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚಿಂತನೆ ನಡೆಸಿದೆ.

ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳ ಪಕ್ಷದ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು.

ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ನಾಯಕರೊಂದಿಗೆ ಈಗಾಗಲೇ ಇದೇ ರೀತಿಯ ಸಭೆಗಳನ್ನು ನಡೆಸಲಾಗಿದೆ. ವರ್ಷದ ಎರಡನೇ ತ್ರೈಮಾಸಿಕದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಗುರಿಯನ್ನು ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ