ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯ

ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ನಡೆಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಬಹುಮಹಡಿ ಅಪಾರ್ಟ್​ಮೆಂಟ್​ನಲ್ಲಿ ಮತಗಟ್ಟೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.

ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ  ಒತ್ತಾಯ
ಮತಗಟ್ಟೆ
Image Credit source: Newsclick

Updated on: Mar 01, 2024 | 12:19 PM

ಮುಂಬರುವ ಲೋಕಸಭಾ ಚುನಾವಣೆ(Lok Sabha Election) ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡುವಂತೆ ಬಿಜೆಪಿಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿ ನಿಯೋಗವು ಬುಧವಾರ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿತ್ತು, ಬಹುಮಹಡಿ ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿತು.

ಮಧ್ಯಾಹ್ನ 3.30ರ ಸುಮಾರಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್(Ashwini Vaishnav) ಅವರು ಪಕ್ಷದ ಇತರೆ ಹಿರಿಯ ನಾಯಕರೊಂದಿಗೆ ನಿಯೋಗದ ನೇತೃತ್ವವಹಿಸಿ ಆಯೋಗವನ್ನು ಭೇಟಿಯಾದರು. ಮೂರು ವಿಷಯಗಳ ಕುರಿತು ಚುನಾವಣಾ ಆಯೋಗದೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವುದು, 100ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುವಂತೆಯೂ ಪಕ್ಷ ಒತ್ತಾಯಿಸಿದೆ.

ಇದುವರೆಗೆ ಚುನಾವಣಾ ಆಯೋಗವು ದೇಶಾದ್ಯಂತ ಶೇ.50ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚು ಪಾರದರ್ಶಕತೆ ತರಲು ನಾವು ಮತದಾನ ಕೇಂದ್ರಗಳ 100 ಪ್ರತಿಶತ ವಿಡಿಯೋ ರೆಕಾರ್ಡಿಂಗ್​ ಮಾಡಲು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ದೆಹಲಿ, ಹರ್ಯಾಣ, ಗುಜರಾತ್ ಮತ್ತು ಗೋವಾದಲ್ಲಿ ಎಎಪಿ- ಕಾಂಗ್ರೆಸ್ ಸೀಟು ಹಂಚಿಕೆ; ಯಾವ ಕ್ಷೇತ್ರ ಯಾರಿಗೆ?

ಆಯೋಗದ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಗೆ ದೇಶಾದ್ಯಂತ 12ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ರಚಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ