ಚುನಾವಣಾ ಬಾಂಡ್ಗಳು ಮತ್ತೆ ಜಾರಿಗೆ ಬರಬಹುದು: ನಿರ್ಮಲಾ ಸೀತಾರಾಮನ್
ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಚುನವಣಾ ಬಾಂಡ್ಗಳು ಮತ್ತೆ ಜಾರಿಗೆ ಬರಲಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿಂದೂಸ್ತಾನ್ ಟೈಮ್ಸ್ಗೆ ನೀಡಿದ್ದ ಸಂದರ್ಶನದಲ್ಲಿ ಈ ವಿಚಾರ ಕುರಿತು ಮಾತನಾಡಿದ್ದು, ಇದೀಗ ನಿರ್ಮಲಾ ಹೇಳಿಕೆ ವಿರುದ್ಧ ಕಾಂಗ್ರೆಸ್ನ ನಾಯಕ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.
ಚುನಾವಣೆ ಬಳಿಕ ಚುನಾವಣಾ ಬಾಂಡ್(Electoral Bonds)ಗಳು ಮತ್ತೆ ಚಾಲ್ತಿಗೆ ಬರಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ, ಚುನಾವಣಾ ಬಾಂಡ್‌ಗಳ ವಿಷಯದಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಮೇಲೆ ದಾಳಿ ಮಾಡುತ್ತಿವೆ. ಇದು ದೇಶದ ಅತಿದೊಡ್ಡ ಹಗರಣ ಎಂದು ಪ್ರತಿಪಕ್ಷಗಳು ಹೇಳುತ್ತಿವೆ.
ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಬಾಂಡ್‌ಗಳ ಕುರಿತು ಹೇಳಿಕೆಯೊಂದನ್ನು ನೀಡಿದ್ದು ಕಾಂಗ್ರೆಸ್ ಇದನ್ನು ಬಲವಾಗಿ ಟೀಕಿಸಿದೆ. ಸಂದರ್ಶನವೊಂದರಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು (ಚುನಾವಣಾ ಬಾಂಡ್) ಮರಳಿ ತರಲಿದೆ ಎಂದು ಹಣಕಾಸು ಸಚಿವರು ಹೇಳಿದ್ದರು.
ಜೈರಾಮ್ ರಮೇಶ್ ವಾಗ್ದಾಳಿ ನಿರ್ಮಲಾ ಸೀತಾರಾಮನ್ ಅವರ ಸಂದರ್ಶನದ ವರದಿಯನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂರೆ ಅದು ಚುನಾವಣಾ ಬಾಂಡ್ಗಳನ್ನು ಮರಳಿ ತರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ, ಅವುಗಳನ್ನು ಅಸಂವಿಧಾನಿಕ ಎಂದು ಕರೆಯಲಾಗುತ್ತಿದೆ.
ಮತ್ತಷ್ಟು ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹಣ ಎಲ್ಲೆಲ್ಲಿ ಹೂಡಿಕೆ ಆಗಿದೆ? ಇಲ್ಲಿದೆ ಇಂಟರೆಸ್ಟಿಂಗ್ ಸಂಗತಿ
ಪೇಪಿಎಂ ಹಗರಣದಲ್ಲಿ ಬಿಜೆಪಿ ಸಾರ್ವಜನಿಕರಿಂದ ಸುಮಾರು 4 ಲಕ್ಷ ಕೋಟಿ ರೂ. ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಮತ್ತೆ ಲೂಟಿ ಮುಂದುವರೆಸಲು ಬಿಜೆಪಿ ಬಯಸುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸೀತಾರಾಮನ್ ಹಿಂದೂಸ್ತಾನ್ ಟೈಮ್ಸ್ಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.
ಫೆಬ್ರವರಿಯಲ್ಲಿ ಚುನಾವಣಾ ಬಾಂಡ್ಗಳನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್ನ ಆದೇಶದಂತೆ ಚುನಾವಣಾ ಬಾಂಡ್ ಪಡೆದವರ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಂಚಿಕೊಂಡಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ