ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ವಯನಾಡಿನಿಂದಲೇ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಶೀಘ್ರವೇ ಬಿಡುಗಡೆ ಮಾಡಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಕಣಕ್ಕಿಳಿಸುವ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ 40 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.
ಈ ಪಟ್ಟಿಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಹಾಗೆಯೇ ಅಮೇಥಿಯಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವ ನಿರ್ಧಾರ ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ಹೆಸರೂ ಚುನಾವಣಾ ರೇಸ್ನಲ್ಲಿದೆ. ರಾಯ್ ಬರೇಲಿಯ ಮೇಲೂ ಪಕ್ಷ ಕಣ್ಣಿಟ್ಟಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚಿಸಲಾಯಿತು. ಇದು ದೆಹಲಿ, ಕರ್ನಾಟಕ, ಕೇರಳ, ಛತ್ತೀಸ್ಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲೆಂಡ್, ಮಣಿಪುರ, ಮೇಘಾಲಯ ಹಾಗೂ ಲಕ್ಷದ್ವೀಪಗಳ ಲೋಕಸಭಾ ಸ್ಥಾನಗಳನ್ನು ಒಳಗೊಂಡಿದೆ. ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕೇರಳದಲ್ಲಿ ಪಕ್ಷದ ಸ್ಕ್ರೀನಿಂಗ್ ಸಮಿತಿಯು ವಯನಾಡು ಕ್ಷೇತ್ರಕ್ಕೆ ರಾಹುಲ್ ಗಾಂಧಿ ಹೆಸರನ್ನು ಸೂಚಿಸಿದೆ. ರಾಹುಲ್ ಗಾಂಧಿ ಮತ್ತೆ ವಯನಾಡಿನಿಂದ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಡಿ ಸತೀಶನ್ ಅವರು ಕೇರಳದ 16 ಸ್ಥಾನಗಳಲ್ಲಿ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಮಿತ್ರಪಕ್ಷಗಳು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. 16 ಕ್ಷೇತ್ರಗಳಲ್ಲಿ ಅಭ್ಯರ್ಥೊಗಳು ಯಾರೆಂಬುದನ್ನು ಸಿಇಸಿ ನಿರ್ಧರಿಸಲಿದೆ.
ಪ್ರಿಯಾಂಕಾ ಗಾಂಧಿ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ರಾಜಕೀಯದ ಬಗ್ಗೆಯೂ ಸಸ್ಪೆನ್ಸ್ ಇದೆ. ರಾಹುಲ್ ಗಾಂಧಿ ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.
2019ರಲ್ಲಿ ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸೋಲು ಕಂಡಿದ್ದರು. ವಯನಾಡಿನಲ್ಲಿ ಗೆದ್ದಿದ್ದರು. ರಾಹುಲ್ ಈ ಹಿಂದೆ ಮೂರು ಬಾರಿ ಅಮೇಥಿಯಿಂದ ಸಂಸದರಾಗಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ