30 ಲಕ್ಷ ಸರ್ಕಾರಿ ಉದ್ಯೋಗ, ಜಾತಿ ಗಣತಿ, ಮಹಿಳಾ ಮೀಸಲಾತಿ, ಕಾಂಗ್ರೆಸ್ನ ಹೊಸ ಭರವಸೆಗಳಿವು
ಈಗ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ಜನತಾ ಪಕ್ಷ ಕೂಡ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷವು ಯಾವುದೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಆದರೆ ಪಕ್ಷವು ತನ್ನ ಪ್ರಣಾಳಿಕೆಯ ಕೆಲಸವನ್ನು ಪೂರ್ಣಗೊಳಿಸಿದೆ. ಪ್ರಣಾಳಿಕೆಯ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಇಲ್ಲಿದೆ.
ಲೋಕಸಭೆ ಚುನಾವಣೆ(Lok Sabha Election)ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಅದನ್ನು ಸಿಡಬ್ಲ್ಯೂಸಿ ಅಂದರೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಅಂಗೀಕರಿಸಿದ ನಂತರ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಕಾಂಗ್ರೆಸ್ನ ಉದ್ದೇಶಿತ ಪ್ರಣಾಳಿಕೆಯ ನೀಲನಕ್ಷೆಯಲ್ಲಿ ಉದ್ಯೋಗ, ಹಣದುಬ್ಬರದಿಂದ ಮುಕ್ತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಚಿದಂಬರಂ ನೇತೃತ್ವದ ಸಮಿತಿಯು ಕರಡು ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಲಿದೆ.
ಇದಾದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಂತರ ಪಕ್ಷದ ಪ್ರಣಾಳಿಕೆಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಮಾಹಿತಿ ಪ್ರಕಾರ ಯುವಕ ಮನ ಗೆಲ್ಲುವ ಭಾಗವಾಗಿ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ ಮಾಡಲಿದೆ.
ಇದನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬುಧವಾರ ಮಧ್ಯಪ್ರದೇಶದಲ್ಲಿ ಘೋಷಿಸಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ತಿಂಗಳಿಗೆ 6,000 ರೂ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿಯನ್ನು ಉಲ್ಲೇಖಿಸಲಾಗಿದೆ.
ಮತ್ತಷ್ಟು ಓದಿ: ಲೋಕಸಭಾ ಚುನಾವಣೆಯಲ್ಲಿ 400 ಅಲ್ಲ 100 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
ಒಬಿಸಿ ವೋಟ್ ಬ್ಯಾಂಕ್ ಪಡೆಯಲು ಜಾತಿವಾರು ಜನಗಣತಿ ನಡೆಸಿ ಹಿಂದುಳಿದ ಜಾತಿಗಳ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಭರವಸೆಯನ್ನೂ ನೀಡಲಾಗಿದೆ.
ಕಳೆದ ಲೋಕಸಭಾ ಚುನಾವಣೆಯ ಭರವಸೆಯನ್ನು ಪುನರುಚ್ಚರಿಸಿದ ಕಾಂಗ್ರೆಸ್ ಕನಿಷ್ಠ ಆದಾಯ ಯೋಜನೆಯಡಿ ಬಡವರಿಗೆ ವಾರ್ಷಿಕ 72 ಸಾವಿರ ರೂ. ನೀಡಲು ನಿರ್ಧರಿಸಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಗಾಗಿ ಸಿದ್ಧಪಡಿಸಿದ ದಾಖಲೆಯಲ್ಲಿ, ಮುಸ್ಲಿಮರನ್ನು ಓಲೈಸಲು ಸಾಚಾರ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವುದಾಗಿ ಉಲ್ಲೇಖಿಸಿದೆ. ಬಿಜೆಪಿ ಈ ಶಿಫಾರಸುಗಳು ಚುನಾವಣೆಯಲ್ಲಿ ದೊಡ್ಡ ವಿವಾದವನ್ನಾಗಿ ಎಬ್ಬಿಸಬಹುದು.
ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಯಾರಿದ್ದಾರೆ? 2024 ರ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ 16 ಸದಸ್ಯರ ಸಮಿತಿಯನ್ನು ರಚಿಸಿತ್ತು, ಅವರ ಕೆಲಸ ಪ್ರಣಾಳಿಕೆಯನ್ನು ಸಿದ್ಧಪಡಿಸುವುದು. ಕಳೆದ ವರ್ಷ ಡಿಸೆಂಬರ್‌ನಲ್ಲಿ ರಚಿಸಲಾದ ಈ ಸಮಿತಿಯ ಅಧ್ಯಕ್ಷರು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ. ಚಿದಂಬರಂ ಅವರಲ್ಲದೆ, ಟಿಎಸ್ ಸಿಂಗ್ ದೇವ್, ಪ್ರಿಯಾಂಕಾ ಗಾಂಧಿ ವಾದ್ರಾ, ಸಿದ್ದರಾಮಯ್ಯ, ಜೈರಾಮ್ ರಮೇಶ್, ಶಶಿ ತರೂರ್, ಪ್ರವೀಣ್ ಚಕ್ರವರ್ತಿ, ಇಮ್ರಾನ್ ಪ್ರತಾಪ್‌ಗರ್ಹಿ, ರಂಜಿತ್ ರಂಜನ್, ಓಂಕಾರ್ ಸಿಂಗ್ ಮಾರ್ಕಮ್, ಜಿಗ್ನೇಶ್ ಮೇವಾನಿ ಇದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ