ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ

ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಸೋಲಿನ ಭಯದಿಂದ ಹತಾಶರಾದ ಬಿಜೆಪಿ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ
Image Credit source: NDTV
Follow us
ನಯನಾ ರಾಜೀವ್
|

Updated on: May 06, 2024 | 8:21 AM

ಉತ್ತರ ಪ್ರದೇಶ(Uttar Pradesh)ದ ಅಮೇಥಿ(Amethi)ಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದರು ಮತ್ತು ಗದ್ದಲವನ್ನು ಸೃಷ್ಟಿಸಿದ ನಂತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಘಟನೆಯ ನಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿದರು.

ಘಟನೆಯ ನಂತರ ಸಿಒ ಸಿಟಿ ಮಯಾಂಕ್ ದ್ವಿವೇದಿ ಅವರೊಂದಿಗೆ ಭಾರೀ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿತು. ಈ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಒ ಸಿಟಿ ದ್ವಿವೇದಿ ಭರವಸೆ ನೀಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಸೋಲಿನ ಭಯದಿಂದ ಹತಾಶರಾದ ಬಿಜೆಪಿ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿ ಜನರ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿದೆ. ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Lok Sabha Elections: ಅಮೇಥಿ, ರಾಯ್‌ಬರೇಲಿಯಲ್ಲಿ ಕಾಂಗ್ರೆಸ್​ನಿಂದ ಕಣಕ್ಕಿಳಿಯಲು ರಾಹುಲ್ ಗಾಂಧಿ ನಕಾರ

ಘಟನೆಯಲ್ಲಿ ಸ್ಥಳೀಯರ ಕಾರುಗಳಿಗೂ ಹಾನಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಇಡೀ ಘಟನೆಯಲ್ಲಿ ಪೊಲೀಸ್ ಆಡಳಿತ ಮೂಕಪ್ರೇಕ್ಷಕನಂತೆ ನಿಂತಿತ್ತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಇತ್ತೀಚೆಗೆ ಕಾಂಗ್ರೆಸ್ ಪಕ್ಷವು ಕಿಶೋರಿ ಲಾಲ್ ಶರ್ಮಾ ಅವರನ್ನು ಅಮೇಥಿಯಿಂದ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಬಿಎಸ್ಪಿಯಿಂದ ನನ್ಹೆ ಸಿಂಗ್ ಚೌಹಾಣ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಕಳೆದ ಮೂರು ದಿನಗಳಿಂದ ಅಮೇಥಿಯಲ್ಲಿ ಸಕ್ರಿಯರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು