ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ

ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಸೋಲಿನ ಭಯದಿಂದ ಹತಾಶರಾದ ಬಿಜೆಪಿ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ
Image Credit source: NDTV

Updated on: May 06, 2024 | 8:21 AM

ಉತ್ತರ ಪ್ರದೇಶ(Uttar Pradesh)ದ ಅಮೇಥಿ(Amethi)ಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದರು ಮತ್ತು ಗದ್ದಲವನ್ನು ಸೃಷ್ಟಿಸಿದ ನಂತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಘಟನೆಯ ನಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿದರು.

ಘಟನೆಯ ನಂತರ ಸಿಒ ಸಿಟಿ ಮಯಾಂಕ್ ದ್ವಿವೇದಿ ಅವರೊಂದಿಗೆ ಭಾರೀ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿತು. ಈ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಒ ಸಿಟಿ ದ್ವಿವೇದಿ ಭರವಸೆ ನೀಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಸೋಲಿನ ಭಯದಿಂದ ಹತಾಶರಾದ ಬಿಜೆಪಿ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿ ಜನರ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿದೆ. ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Lok Sabha Elections: ಅಮೇಥಿ, ರಾಯ್‌ಬರೇಲಿಯಲ್ಲಿ ಕಾಂಗ್ರೆಸ್​ನಿಂದ ಕಣಕ್ಕಿಳಿಯಲು ರಾಹುಲ್ ಗಾಂಧಿ ನಕಾರ

ಘಟನೆಯಲ್ಲಿ ಸ್ಥಳೀಯರ ಕಾರುಗಳಿಗೂ ಹಾನಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಇಡೀ ಘಟನೆಯಲ್ಲಿ ಪೊಲೀಸ್ ಆಡಳಿತ ಮೂಕಪ್ರೇಕ್ಷಕನಂತೆ ನಿಂತಿತ್ತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಇತ್ತೀಚೆಗೆ ಕಾಂಗ್ರೆಸ್ ಪಕ್ಷವು ಕಿಶೋರಿ ಲಾಲ್ ಶರ್ಮಾ ಅವರನ್ನು ಅಮೇಥಿಯಿಂದ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಬಿಎಸ್ಪಿಯಿಂದ ನನ್ಹೆ ಸಿಂಗ್ ಚೌಹಾಣ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಕಳೆದ ಮೂರು ದಿನಗಳಿಂದ ಅಮೇಥಿಯಲ್ಲಿ ಸಕ್ರಿಯರಾಗಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us