ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಗುಜರಾತ್​ನ ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಆಕ್ರೋಶಗೊಂಡು ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದೆ.

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​
ನೀಲೇಶ್​ ಕುಂಭಾನಿ
Follow us
ನಯನಾ ರಾಜೀವ್
|

Updated on: Apr 26, 2024 | 3:06 PM

ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರ(Surat Lok Sabha Constituency)ದಿಂದ ಕಾಂಗ್ರೆಸ್​ ಅಭ್ಯರ್ಥಿ(Congress Candidate) ನೀಲೇಶ್​ ಕುಂಭಾನಿ(Nilesh Kumbhani)  ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ. ನೀಲೇಶ್​ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಕುರಿತು ಕಾಂಗ್ರೆಸ್​ ಮಾತನಾಡಿತ್ತು.

ನೀಲೇಶ್ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲು ತಳೆದಿದೆ, ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ. ಇದರಿಂದಾಗಿ ಸೂರತ್​ನ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್​ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ, ಕಾಂಗ್ರೆಸ್​ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದಿ: Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಕುಂಭಾಣಿ ಮನೆ ಮುಂದೆ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್​ ಅವರು ಬಿಜೆಪಿಯವರ ಒತ್ತಾಯಕ್ಕೆ ಮಣಿದು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಕಬಳಿಸಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ನೀಲೇಶ್​ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್