ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ

Model Code of Conduct: ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಜಾರಿಗೆ ಬಂದಿದೆ. ನೀತಿ ಸಂಹಿತೆ ನಿಯಮದಡಿ ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ? ಜನಸಾಮಾನ್ಯರ ಮೇಲೆ ಕೂಡ ಈ ನಿಯಮಗಳು ಹೇಗೆ ಪ್ರಭಾವ ಬೀರುತ್ತವೆ ಎಂಬ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 16, 2024 | 4:49 PM

ನವದೆಹಲಿ, ಮಾರ್ಚ್​ 16: ಲೋಕಸಭೆ ಚುನಾವಣೆ (Lok Sabha Elections) ವೇಳಾಪಟ್ಟಿ ಪ್ರಕಟವಾಗಿದೆ. ಇದರೊಂದಿಗೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವೂ ಪ್ರಕಟವಾಗಿದೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ಸೇರಿವೆ. ದಿನಾಂಕಗಳ ಘೋಷಣೆಯ ಬೆನ್ನಲ್ಲೇ ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ದೇಶಾದ್ಯಂತ ಜಾರಿಗೆ ಬಂದಿದೆ. ನೀತಿ ಸಂಹಿತೆ ಎಂದರೆ ಏನು, ಅದನ್ನು ಯಾರು ಜಾರಿಗೊಳಿಸುತ್ತಾರೆ? ಅದು ಜಾರಿಯಾದ ನಂತರ ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ ಮತ್ತು ಯಾವುದಕ್ಕೆಲ್ಲ ಅನುಮತಿ ಇದೆ ಎಂಬ ಮಾಹಿತಿ ಇಲ್ಲಿದೆ.

ನೀತಿ ಸಂಹಿತೆ ಎಂದರೇನು?

ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಕೆಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನೀತಿ ಸಂಹಿತೆ ಎಂದು ಕರೆಯಲಾಗುತ್ತದೆ. ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಈ ನಿಯಮಗಳನ್ನು ಪಾಲಿಸುವುದು ಅಗತ್ಯ. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ನೀತಿ ಸಂಹಿತೆಯ ಅಡಿಯಲ್ಲಿ ತಿಳಿಸಲಾಗಿದೆ. ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ, ಚುನಾವಣಾ ಆಯೋಗವು ಶಾಂತಿಯುತ ಚುನಾವಣೆಗಳಿಗಾಗಿ ನೀತಿ ಸಂಹಿತೆಯನ್ನು ಅನುಸರಿಸಲು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡುತ್ತದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ನಿಮ್ಮ ಕ್ಷೇತ್ರದಲ್ಲಿ ಯಾವಾಗ ಮತದಾನ? ಇಲ್ಲಿದೆ ನೋಡಿ

ನೀತಿ ಸಂಹಿತೆ ಮೊದಲು ಆರಂಭವಾದದ್ದು ಯಾವಾಗ?

1960 ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಮೊದಲು ಪರಿಚಯಿಸಲಾಯಿತು. 1962ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗ ಮೊದಲ ಬಾರಿಗೆ ಈ ನಿಯಮಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿತ್ತು. ನೀತಿ ಸಂಹಿತೆ ವ್ಯವಸ್ಥೆಯು 1967ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಂದ ಜಾರಿಗೆ ಬಂದಿತು. ಸಂಹಿತೆ ಜಾರಿಗೆ ಬಂದ ನಂತರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೌಕರರು ಚುನಾವಣಾ ಆಯೋಗದ ನೌಕರರಾಗಿ ಕೆಲಸ ಮಾಡಬೇಕೇ ಹೊರತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸರ್ಕಾರದ ನೌಕರರಲ್ಲ. ಚುನಾವಣೆ ಮುಗಿದ ನಂತರ ನೀತಿ ಸಂಹಿತೆ ರದ್ದಾಗುತ್ತದೆ.

ಸಚಿವರು, ಶಾಸಕರಿಗೆ ಏನೇನು ನಿರ್ಬಂಧ?

ಸಚಿವರು ಸರ್ಕಾರಿ ವೆಚ್ಚದಲ್ಲಿ ಚುನಾವಣಾ ರ‍್ಯಾಲಿ ನಡೆಸುವಂತಿಲ್ಲ. ಈ ಅವಧಿಯಲ್ಲಿ ಸಚಿವರು ತಮ್ಮ ನಿವಾಸದಿಂದ ಕಚೇರಿಗೆ ಹೋಗಲು ಮಾತ್ರ ಸರ್ಕಾರಿ ವಾಹನಗಳನ್ನು ಬಳಸಬಹುದು. ಚುನಾವಣಾ ರ‍್ಯಾಲಿಗಳು ಮತ್ತು ಪ್ರವಾಸಗಳಿಗೆ ಅವುಗಳನ್ನು ಬಳಸಬಾರದು.

ನೀತಿ ಸಂಹಿತೆ ನಿಯಮಗಳು ಹೀಗಿವೆ

ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಯಾವುದೇ ಸಂದರ್ಭದಲ್ಲಿ ಸರ್ಕಾರದ ಹಣವನ್ನು ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ಆದರೆ ಕೆಲವು ಕೆಲಸಗಳು ಈಗಾಗಲೇ ಪ್ರಾರಂಭವಾಗಿದ್ದರೆ ಅದನ್ನು ಮುಂದುವರಿಸಬಹುದು.

ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.

ನೀತಿ ಸಂಹಿತೆಯ ಅಡಿಯಲ್ಲಿ, ಸರ್ಕಾರವು ಯಾವುದೇ ಸರ್ಕಾರಿ ಅಧಿಕಾರಿ ಅಥವಾ ಉದ್ಯೋಗಿಯನ್ನು ವರ್ಗಾಯಿಸಲು ಅಥವಾ ಪೋಸ್ಟ್ ಮಾಡಲು ಸಾಧ್ಯವಿಲ್ಲ. ವರ್ಗಾವಣೆ ಬಹಳ ಮುಖ್ಯವಾಗಿದ್ದರೆ ಚುನಾವಣಾ ಆಯೋಗದಿಂದ ಅನುಮತಿ ಪಡೆಯುವುದು ಅಗತ್ಯ.

ಇದನ್ನೂ ಓದಿ: ಮತದಾನದ ಶಾಯಿ: ಮೈಸೂರಿನಲ್ಲಿ ಮಾತ್ರ ತಯಾರಾಗುತ್ತದೆ ಮತದಾನದ ಶಾಯಿ; ಇಲ್ಲಿದೆ ಸ್ವಾರಸ್ಯಕರ ಮಾಹಿತಿ

ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಸಭೆ ಆಯೋಜಿಸುವ, ಮೆರವಣಿಗೆ ನಡೆಸುವ ಮತ್ತು ಧ್ವನಿವರ್ಧಕಗಳನ್ನು ಬಳಸುವ ಮೊದಲು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಲಿಖಿತ ಅನುಮತಿಯನ್ನು ಪಡೆಯುವುದು ಅವಶ್ಯಕ. ರಾತ್ರಿ 10.00 ರಿಂದ ಬೆಳಗ್ಗೆ 6.00 ರವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ನೀತಿ ಸಂಹಿತೆ ಉಲ್ಲಂಘಿಸಿದರೆ ಏನಾಗುತ್ತದೆ?

ಯಾವುದೇ ರಾಜಕೀಯ ಪಕ್ಷ ಅಥವಾ ಅದರ ಅಭ್ಯರ್ಥಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ, ಅಂಥವರನ್ನು ಪ್ರಚಾರದಿಂದ ನಿಷೇಧಿಸಬಹುದು. ಅಭ್ಯರ್ಥಿಯು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಬಹುದು. ಇಷ್ಟೇ ಅಲ್ಲ, ಅಗತ್ಯವಿದ್ದರೆ, ಅಭ್ಯರ್ಥಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಸಹ ದಾಖಲಿಸಬಹುದು ಮತ್ತು ಆತ ಜೈಲುಪಾಲಾಗುವ ಸಾಧ್ಯತೆಯೂ ಇದೆ.

ಜನ ಸಾಮಾನ್ಯರಿಗೆ ನೀತಿ ಸಂಹಿತೆ ಹೇಗೆ ಅನ್ವಯ?

ನೀತಿ ಸಂಹಿತೆ ಕೇವಲ ರಾಜಕೀಯ ಪಕ್ಷಗಳಿಗೆ ಅಥವಾ ಅಭ್ಯರ್ಥಿಗಳಿಗೆ ಸೀಮಿತವಾಗಿಲ್ಲ. ಇದು ಸಾಮಾನ್ಯರಿಗೂ ಅನ್ವಯಿಸುತ್ತದೆ. ಅಂದರೆ, ಯಾರಾದರೂ ತಮ್ಮ ನಾಯಕರ ಪ್ರಚಾರದಲ್ಲಿ ತೊಡಗಿದ್ದರೆ, ಅವರು ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮೇಲೆ ತಿಳಿಸಿದ ನಿಯಮಗಳನ್ನು ನಿರ್ಲಕ್ಷಿಸಿ ಕೆಲವು ಕೆಲಸಗಳನ್ನು ಮಾಡಲು ಯಾವುದೇ ರಾಜಕಾರಣಿ ನಿಮ್ಮನ್ನು ಕೇಳಿದರೆ, ನೀತಿ ಸಂಹಿತೆಯ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಹೇಳುವ ಮೂಲಕ ನೀವು ನಿರಾಕರಿಸಬಹುದು. ಯಾರಾದರೂ ಪ್ರಚಾರ ಮಾಡಿ ಸಿಕ್ಕಿಬಿದ್ದರೆ ಕ್ರಮ ಕೈಗೊಳ್ಳಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Sat, 16 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ