RKS Bhadauria Joins BJP: ಭಾರತೀಯ ವಾಯು ಸೇನೆಯ ಮಾಜಿ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಬಿಜೆಪಿಗೆ ಸೇರ್ಪಡೆ
ವಾಯು ಸೇನೆಯ ಮಾಜಿ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ವಾಯು ಸೇನೆಯ ಮಾಜಿ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ(RKS Bhadauria) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭದೌರಿಯಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ದೇಶಕ್ಕೆ ರಫೇಲ್ ಯುದ್ಧ ವಿಮಾನವನ್ನು ತರುವಲ್ಲಿ ಭದೌರಿಯಾ ಅವರದ್ದು ಪ್ರಮುಖ ಪಾತ್ರವಿದೆ.
ಭದೌರಿಯಾ ಅವರು ಸೆಪ್ಟೆಂಬರ್ 2019 ರಿಂದ ಸೆಪ್ಟೆಂಬರ್ 2021 ರವರೆಗೆ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಭದೌರಿಯಾ, PVSM, AVSM, VM, ADC, ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ.
ನೂತನ ಏರ್ ಚೀಫ್ ಆಗಲಿರುವ ರಾಕೇಶ್ ಅವರು ರಾಫೆಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಮೊದಲ ಐಎಎಫ್ ಫೈಲಟ್ ಎಂಬ ಹೆಗ್ಗಳಿಕೆ ಇವರದ್ದಾಗಿದೆ.
ಆಗ್ರಾ ಸಮೀಪದ ಭದೌರಿಯಾ ಎಂಬ ಹಳ್ಳಿಯಲ್ಲಿ ರಾಕೇಶ್ ಕುಮಾರ್ ಸಿಂಗ್ ಜನಿಸಿದ್ದರು. ಆರ್ ಕೆ ಎಸ್ ಅವರು ಪರಮ್ ವಿಶಿಷ್ಟ ಸೇವಾ ಪದಕ, ಅತೀ ವಿಶಿಷ್ಟ ಸೇವಾ ಪದಕ, ವಾಯುಸೇನಾ ಪದಕ ಪಡೆದಿದ್ದಾರೆ. ಆರ್ ಕೆಎಸ್ ಅವರು ಪುಣೆಯಯಲ್ಲಿ ಮಾಸ್ಟರ್ ಇನ್ ಡಿಫೆನ್ಸ್ ಸ್ಟಡೀಸ್ ನಲ್ಲಿ ಪದವಿ ಪಡೆದಿದ್ದರು.
ಬಾಂಗ್ಲಾದೇಶದ ಕಮಾಂಡ್ ಅಂಡ್ ಸ್ಟಾಪ್ ಕಾಲೇಜಿನಲ್ಲಿ ರಕ್ಷಣಾ ಕಲಿಕೆಯಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದರು. 1980ರಲ್ಲಿ ಭಾರತೀಯ ವಾಯುಪಡೆಯಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದರು. ಈವರೆಗೆ ವಿವಿಧ ಯುದ್ಧ ವಿಮಾನಗಳಲ್ಲಿ ಸುಮಾರು 4250 ಗಂಟೆಗಳ ಕಾಲ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ. ಅಷ್ಟೇ ಅಲ್ಲ ಹಲವಾರು ಕಾರ್ಯಾಚರಣೆಯಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:22 pm, Sun, 24 March 24