Lok Sabha Election: ಪಶ್ಚಿಮ ಬಂಗಾಳದಲ್ಲಿ ಬೇರೆ ಬೇರೆ ಪಕ್ಷಗಳಿಂದ ಚುನಾವಣಾ ಕಣಕ್ಕಿಳಿದ ವಿಚ್ಛೇದಿತ ದಂಪತಿ

|

Updated on: Mar 11, 2024 | 8:35 AM

ಪಶ್ಚಿಮ ಬಂಗಾಳದಲ್ಲಿ ವಿಚ್ಛೇದಿತ ದಂಪತಿ ಚುನಾವಣಾ ಕಣಕ್ಕಿಳಿದಿದ್ದಾರೆ. ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಪಶ್ಚಿಮ ಬಂಗಾಳದಲ್ಲಿ 2021ರ ವಿಧಾನಸಭೆ ಚುನಾವಣೆಗೂ ಮುನ್ನ ಈ ದಂಪತಿ ಬೇರ್ಪಟ್ಟಿದ್ದರು. ಲೋಕಸಭೆ ಚುನಾವಣೆಗೆ ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಟಿಎಂಸಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Lok Sabha Election: ಪಶ್ಚಿಮ ಬಂಗಾಳದಲ್ಲಿ ಬೇರೆ ಬೇರೆ ಪಕ್ಷಗಳಿಂದ ಚುನಾವಣಾ ಕಣಕ್ಕಿಳಿದ ವಿಚ್ಛೇದಿತ ದಂಪತಿ
ಪಶ್ಚಿಮ ಬಂಗಾಳ ವಿಚ್ಛೇದಿತ ದಂಪತಿ ಸ್ಪರ್ಧೆ
Image Credit source: Timesnow
Follow us on

2024ರ ಲೋಕಸಭೆ ಚುನಾವಣೆ(Lok Sabha Election)ಗೆ ರಾಜ್ಯದ 42 ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಏತನ್ಮಧ್ಯೆ, ಬಂಗಾಳದ ಬಿಷ್ಣುಪುರ ಕ್ಷೇತ್ರವು ಇಡೀ ದೇಶದಲ್ಲಿ ಚರ್ಚೆಯ ವಿಷಯವಾಗಿದೆ. ಏಕೆಂದರೆ ವಿಚ್ಛೇದಿತ ದಂಪತಿ ಬೇರೆ ಬೇರೆ ಪಕ್ಷಗಳಿಂದ ಕಣಕ್ಕಿಳಿದಿದ್ದಾರೆ. ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಸೌಮಿತ್ರಾ ಖಾನ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಭಾನುವಾರ (ಮಾರ್ಚ್ 10) ಅದೇ ಸ್ಥಾನದಿಂದ ಟಿಎಂಸಿ ಅವರ ಮಾಜಿ ಪತ್ನಿ ಸುಜಾತಾ ಮಂಡಲ್ ಅವರಿಗೆ ಟಿಕೆಟ್ ನೀಡಿದೆ.

ವಿಧಾನಸಭಾ ಚುನಾವಣೆಗೂ ಮುನ್ನ ದಂಪತಿ ಬೇರ್ಪಟ್ಟಿದ್ದರು
ಸೌಮಿತ್ರಾ ಖಾನ್ ಮತ್ತು ಸುಜಾತಾ ಮಂಡಲ್ ಅವರು ಪಶ್ಚಿಮ ಬಂಗಾಳದಲ್ಲಿ 2021 ರ ವಿಧಾನಸಭಾ ಚುನಾವಣೆಯ ಮೊದಲು ಬೇರ್ಪಟ್ಟರು. ಆ ಸಮಯದಲ್ಲಿ, ಸುಜಾತಾ ಮಂಡಲ್ ತೃಣಮೂಲ ಕಾಂಗ್ರೆಸ್‌ಗೆ ಸೇರಿದ ನಂತರ, ಸೌಮಿತ್ರಾ ಖಾನ್ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದರು.

2019ರ ಲೋಕಸಭೆ ಚುನಾವಣೆಗೂ ಮುನ್ನ ಸೌಮಿತ್ರಾ ಖಾನ್ ಟಿಎಂಸಿಯಿಂದ ಬಿಜೆಪಿ ಸೇರಿದ್ದರು. ಆ ಸಮಯದಲ್ಲಿ ಅವರ ಪತ್ನಿ ಸುಜಾತಾ ಮಂಡಲ್ ಅವರ ಪರವಾಗಿ ಸಾಕಷ್ಟು ಪ್ರಚಾರ ಮಾಡಿದ್ದರು. 2024ರ ಲೋಕಸಭೆ ಚುನಾವಣೆಗೆ ಟಿಎಂಸಿ ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ.

ಮತ್ತಷ್ಟು ಓದಿ:ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಹೋರಾಟ: ಮಮತಾ ಬ್ಯಾನರ್ಜಿ

ಬಂಗಾಳ ಟಿಎಂಸಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ
ಪಶ್ಚಿಮ ಬಂಗಾಳದಲ್ಲಿ, ಟಿಎಂಸಿ ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಮೂಲಕ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಊಹಾಪೋಹಗಳಿಗೆ ಸಂಪೂರ್ಣ ತೆರೆ ಎಳೆದಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಇನ್ನೂ ಟಿಎಂಸಿ ಜೊತೆ ಮೈತ್ರಿಗಾಗಿ ಕೇಳಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಮ್ಮ ಬಾಗಿಲು ಸದಾ ತೆರೆದಿದ್ದು, ನಾಮಪತ್ರ ಹಿಂಪಡೆಯುವ ಮುನ್ನ ಯಾವಾಗ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು ಎಂದಿದ್ದಾರೆ.

ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ ಟಿಎಂಸಿ 6 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ತಮ್ಮ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಈ ವೇಳೆ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಅವರು, ಮೋದಿಯವರ ಗ್ಯಾರಂಟಿಗೆ ಯಾವುದೇ ವಾರಂಟಿ ಇಲ್ಲ. ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಮಾತ್ರ ಭರವಸೆಗಳನ್ನು ಈಡೇರಿಸುತ್ತದೆ ಎಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ