AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂರ ಕುರಿತು ಮನಮೋಹನ್ ಸಿಂಗ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ರಶೀದ್ ಅಲ್ವಿ ಕಿಡಿ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ನಿರಂತರವಾಗಿ ವಾಗ್ದಾಳಿ ಮಾಡಿದ್ದರು. ಬಳಿಕ ಕಾಂಗ್ರೆಸ್​ನ ಹಲವು ನಾಯಕರು ಮೋದಿ ವಿರುದ್ಧ ಕಿಡಿಕಾರಿದ್ದರು. ಸದ್ಯ ಅದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಶೀದ್ ಅಲ್ವಿ ಕೂಡ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.

ಮುಸ್ಲಿಂರ ಕುರಿತು ಮನಮೋಹನ್ ಸಿಂಗ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ರಶೀದ್ ಅಲ್ವಿ ಕಿಡಿ
ರಶೀದ್ ಅಲ್ವಿ, ಪ್ರಧಾನಿ ಮೋದಿ
TV9 Web
| Edited By: |

Updated on:Apr 23, 2024 | 9:29 PM

Share

ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಂರಿಗೆ (Muslims) ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಎಂದಿಗೂ ಹೇಳಿಲ್ಲ. ಆದರೆ ಸಮಾಜದಲ್ಲಿ ಕೊನೆಯ ಸಾಲಿನಲ್ಲಿ ನಿಲ್ಲುವವರು ಬಡವರು ಮತ್ತು ಹಿಂದುಳಿದವರು ನಿಜಕ್ಕೂ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿರುತ್ತಾರೆ ಎಂದು ಮನಮೋಹನ್ ಸಿಂಗ್ ಯಾವಾಗಲೂ ಹೇಳುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಹೇಳಿದ್ದಾರೆ. ಆ ಮೂಲಕ ಮುಸ್ಲಿಂರಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಂವಾದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ರಶೀದ್ ಅಲ್ವಿ, ದೇಶದ ಮುಸ್ಲಿಂರು ಇನ್ನೂ ಹಿಂದಿನ ಸಾಲಿನಲ್ಲಿ ನಿಂತಿದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ಮುಸ್ಲಿಂರು ಇನ್ನೂ ಸಾಕಷ್ಟು ಹಿಂದುಳಿದಿದ್ದಾರೆ. ಈ ಹಿನ್ನೆಲೆ ಮನಮೋಹನ್ ಸಿಂಗ್ ಅವರ ಹೇಳಿಕೆ ಸರಿಯಿದೆ. ಸಮಾಜದಲ್ಲಿ ಅತ್ಯಂತ ಹಿಂದುಳಿದವರು ಮುಂದೆ ಬರಬೇಕು ಮತ್ತು ಅವರ ಹಕ್ಕುಗಳನ್ನು ಪಡೆಯಬೇಕು ಎಂದು ಮನಮೋಹನ್ ಸಿಂಗ್ ಯಾವಾಗಲೂ ಹೇಳುತ್ತಿದ್ದರು ಎಂದಿದ್ದಾರೆ.

ಹಿಂದುಳಿದವರನ್ನು ಮುಂದೆ ತರದಿದ್ದರೆ ದೇಶವು ಎಂದಿಗೂ ಬಲಿಷ್ಠವಾಗಲು ಸಾಧ್ಯವಿಲ್ಲ. ಹಿಂದುಳಿದವರು ಮುಂದೆ ಬಂದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ. ಜೊತೆಗೆ ದೇಶವೂ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಶಿ ತರೂರ್​ ತಮ್ಮ ದುರಹಂಕಾರ, ತಿರಸ್ಕಾರದ ಮನೋಭಾವದಿಂದಲೇ ಚುನಾವಣೆಯಲ್ಲಿ ಸೋಲುತ್ತಾರೆ: ಜೆಪಿ ನಡ್ಡಾ

ಇದೇ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿರುವ ರಶೀದ್ ಅಲ್ವಿ, ಇಂದು ಬಿಜೆಪಿ ಶ್ರೀಮಂತರತ್ತ ಮಾತ್ರ ನೋಡುತ್ತಿದೆ, ಬಡವರ ಕಡೆ ಗಮನ ಹರಿಸುತ್ತಿಲ್ಲ. ಬಡವರ ಅಗತ್ಯತೆಗಳು ಅವರ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?

ಇತ್ತೀಚೆಗೆ ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು 2006ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು. ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಆಸ್ತಿಯಲ್ಲಿ ಮುಸ್ಲಿಂರಿಗೆ ಮೊದಲ ಹಕ್ಕು. ಜೊತೆಗೆ ದೇಶದ ಆಸ್ತಿಯನ್ನು ನುಸುಳುಕೋರರಿಗೆ ನೀಡಲಾಗುವುದು ಎಂದು ಮೋದಿ ಹೇಳಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ನಗರ ನಕ್ಸಲರ ಚಿಂತನೆಯನ್ನು ಮತ್ತಷ್ಟು ಉತ್ತೇಜಿಸಲಿದೆ ಎಂದು ಕಿಡಿಕಾರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Tue, 23 April 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?