ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಂರಿಗೆ (Muslims) ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಎಂದಿಗೂ ಹೇಳಿಲ್ಲ. ಆದರೆ ಸಮಾಜದಲ್ಲಿ ಕೊನೆಯ ಸಾಲಿನಲ್ಲಿ ನಿಲ್ಲುವವರು ಬಡವರು ಮತ್ತು ಹಿಂದುಳಿದವರು ನಿಜಕ್ಕೂ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿರುತ್ತಾರೆ ಎಂದು ಮನಮೋಹನ್ ಸಿಂಗ್ ಯಾವಾಗಲೂ ಹೇಳುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಹೇಳಿದ್ದಾರೆ. ಆ ಮೂಲಕ ಮುಸ್ಲಿಂರಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಸಂವಾದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ರಶೀದ್ ಅಲ್ವಿ, ದೇಶದ ಮುಸ್ಲಿಂರು ಇನ್ನೂ ಹಿಂದಿನ ಸಾಲಿನಲ್ಲಿ ನಿಂತಿದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ಮುಸ್ಲಿಂರು ಇನ್ನೂ ಸಾಕಷ್ಟು ಹಿಂದುಳಿದಿದ್ದಾರೆ. ಈ ಹಿನ್ನೆಲೆ ಮನಮೋಹನ್ ಸಿಂಗ್ ಅವರ ಹೇಳಿಕೆ ಸರಿಯಿದೆ. ಸಮಾಜದಲ್ಲಿ ಅತ್ಯಂತ ಹಿಂದುಳಿದವರು ಮುಂದೆ ಬರಬೇಕು ಮತ್ತು ಅವರ ಹಕ್ಕುಗಳನ್ನು ಪಡೆಯಬೇಕು ಎಂದು ಮನಮೋಹನ್ ಸಿಂಗ್ ಯಾವಾಗಲೂ ಹೇಳುತ್ತಿದ್ದರು ಎಂದಿದ್ದಾರೆ.
IANS Exclusive
Former PM Manmohan Singh said, “People in the last line have first right on resources, and factually, Indian Muslims are in the last line: Rashid Alvi, Congress leader. pic.twitter.com/4QSLzEPmx9
— IANS (@ians_india) April 23, 2024
ಹಿಂದುಳಿದವರನ್ನು ಮುಂದೆ ತರದಿದ್ದರೆ ದೇಶವು ಎಂದಿಗೂ ಬಲಿಷ್ಠವಾಗಲು ಸಾಧ್ಯವಿಲ್ಲ. ಹಿಂದುಳಿದವರು ಮುಂದೆ ಬಂದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ. ಜೊತೆಗೆ ದೇಶವೂ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶಶಿ ತರೂರ್ ತಮ್ಮ ದುರಹಂಕಾರ, ತಿರಸ್ಕಾರದ ಮನೋಭಾವದಿಂದಲೇ ಚುನಾವಣೆಯಲ್ಲಿ ಸೋಲುತ್ತಾರೆ: ಜೆಪಿ ನಡ್ಡಾ
ಇದೇ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿರುವ ರಶೀದ್ ಅಲ್ವಿ, ಇಂದು ಬಿಜೆಪಿ ಶ್ರೀಮಂತರತ್ತ ಮಾತ್ರ ನೋಡುತ್ತಿದೆ, ಬಡವರ ಕಡೆ ಗಮನ ಹರಿಸುತ್ತಿಲ್ಲ. ಬಡವರ ಅಗತ್ಯತೆಗಳು ಅವರ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು 2006ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು. ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಆಸ್ತಿಯಲ್ಲಿ ಮುಸ್ಲಿಂರಿಗೆ ಮೊದಲ ಹಕ್ಕು. ಜೊತೆಗೆ ದೇಶದ ಆಸ್ತಿಯನ್ನು ನುಸುಳುಕೋರರಿಗೆ ನೀಡಲಾಗುವುದು ಎಂದು ಮೋದಿ ಹೇಳಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ನಗರ ನಕ್ಸಲರ ಚಿಂತನೆಯನ್ನು ಮತ್ತಷ್ಟು ಉತ್ತೇಜಿಸಲಿದೆ ಎಂದು ಕಿಡಿಕಾರಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:27 pm, Tue, 23 April 24