ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್‌ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರುವುದು ಅವರಿಗೆ ಸಂಕಷ್ಟ ತಂದಿದೆ.

ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ
ಮಾಯಾವತಿ
Follow us
ನಯನಾ ರಾಜೀವ್
|

Updated on: May 08, 2024 | 10:33 AM

ಕಳೆದ ಡಿಸೆಂಬರ್​ನಲ್ಲಷ್ಟೇ ಉತ್ತರ ಪ್ರದೇಶದ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿ ಹೊಸ ಉತ್ತರಾಧಿಕಾರಿಯನ್ನಾಗಿ ಮಾಯಾವತಿ(Mayawati) ಸೋದರಳಿಯ ಆಕಾಶ್​ ಆನಂದ್​(Akash Anand)ರನ್ನು ನೇಮಕ ಮಾಡಿತ್ತು. ಇದೀಗ ಐದು ತಿಂಗಳಲ್ಲೇ ಆಕಾಶ್​ ಗದ್ದುಗೆಯಿಂದ ಕೆಳಗಿಳಿದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಮಾಯಾವತಿ ಈ ನಿರ್ಧಾರ ತೆಗೆದುಕೊಳ್ಳಲು ಇದ್ದ ಕಾರಣವೇನೆಂಬುದು ಎಂಬುದು ಬಹಿರಂಗವಾಗಬೇಕಿದೆ.

ಸೀತಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕಾಶ್ ಆನಂದ್ ಬಿಜೆಪಿ ನಾಯಕರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಆಕಾಶ್ ಆನಂದ್ ಅವರ ಈ ಉದ್ರೇಕಕಾರಿ ಭಾಷಣದ ನಂತರ, ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಯಿತು, ಅದರಲ್ಲಿ ಪಕ್ಷದ ಮೂವರು ಅಭ್ಯರ್ಥಿಗಳನ್ನೂ ಹೆಸರಿಸಲಾಯಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಎಸ್ಪಿ ವರಿಷ್ಠೆ ಮಾಯಾವತಿ ಆಕಾಶ್ ಆನಂದ್ ರ್ಯಾಲಿಗಳಿಗೆ ನಿಷೇಧ ಹೇರಿದ್ದರು.

ಇದರ ಹೊರತಾಗಿಯೂ ಅವರು ದೆಹಲಿಯಲ್ಲಿ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು, ಶಿಕ್ಷಕರು ಮುಂತಾದವರನ್ನು ಸಂಪರ್ಕಿಸುತ್ತಲೇ ಇದ್ದರು ಮತ್ತು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಮುಂದುವರೆಸಿದರು. ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಮೊದಲಿನಂತೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಅವರು ಆಕಾಶ್ ಆನಂದ್ ಅವರ ತಂದೆ ಮತ್ತು ಅವರ ಸಹೋದರ ಆನಂದ್ ಕುಮಾರ್ ಅವರನ್ನು ಕೇಳಿದ್ದಾರೆ.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಪಕ್ಷ ಮತ್ತು ಚಳವಳಿಯ ಹಿತಾಸಕ್ತಿ ಮತ್ತು ಡಾ.ಅಂಬೇಡ್ಕರ್ ಅವರ ರಥವನ್ನು ಮುನ್ನಡೆಸುವಲ್ಲಿ ಬಿಎಸ್‌ಪಿ ನಾಯಕತ್ವವು ಯಾವುದೇ ರೀತಿಯ ತ್ಯಾಗಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ಒಂದು ದಶಕದ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸಿದ್ದಂತಹ ಬಿಎಸ್​ಪಿ ಈಗ ಸಧ್ಯಕ್ಕೆ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯದಲ್ಲಿದೆ. ಯಾವುದೇ ಲೋಕಸಭಾ ಸದಸ್ಯರನ್ನು ಹೊಂದಿರದ ಬಿಎಸ್​ಪಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬೆರಳೆಣಿಕೆ ಸದಸ್ಯರನ್ನು ಹೊಂದಿದೆ. ವರ್ಷದಿಂದ ವರ್ಷಕ್ಕೆ ಚುನಾವಣೆಯಿಂದ ಚುನಾವಣೆಗೆ ಬಿಎಸ್​ಪಿಯ ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ.

ಯಾರು ಈ ಆಕಾಶ್ ಆನಂದ್? ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಲಂಡನ್‌ನಲ್ಲಿ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ಓದಿದ್ದಾರೆ. ಆಕಾಶ್ ರಾಜಕೀಯ ಪ್ರವೇಶಿಸಿದ್ದು 2017ರಲ್ಲಿ , ಸಹರಾನ್‌ಪುರ ಸಮಾವೇಶದಲ್ಲಿ ಮೊದಲ ಬಾರಿಗೆ ಮಾಯಾವತಿಯೊಂದಿಗೆ ಆಕಾಶ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು‌. ಮಾಯಾವತಿ ಅವರು 2017 ರಲ್ಲಿ ದೊಡ್ಡ ಸಮಾವೇಶ ನಡೆಸುವ ಮೂಲಕ ಆಕಾಶ್ ಆನಂದ್ ಅವರನ್ನು ರಾಜಕೀಯಕ್ಕೆ ಕರೆತರುವುದಾಗಿ ಘೋಷಿಸಿದ್ದರು. ಈ ಹಿಂದೆ ಆಕಾಶ್ ಅವರು ಬಿಎಸ್ಪಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮತ್ತಷ್ಟು ಓದಿ: ಮಯಾವತಿ ಉತ್ತರಾಧಿಕಾರಿಯಾಗಿ ನೇಮಕವಾದ ಆಕಾಶ್ ಆನಂದ್ ಯಾರು? ಇಲ್ಲಿದೆ ವಿವರ

ಅಲ್ಲದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಮಾಯಾವತಿ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ