Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಶುಕ್ರವಾರ ನಡೆಯಲಿರುವ ಚುನಾವಣೆ ಮುಂದೂಡುವಂತೆ ಕೇರಳ ಮುಸ್ಲಿಂ ಸಂಘಟನೆ ಒತ್ತಾಯ

ಕೇರಳ ಮುಸ್ಲಿಂ ಸಂಘಟನೆಯು ಏಪ್ರಿಲ್ 26ರಂದು ಶುಕ್ರವಾರ ನಡೆಯಲಿರುವ ಚುನಾವಣೆಯನ್ನು ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

Lok Sabha Election: ಶುಕ್ರವಾರ ನಡೆಯಲಿರುವ ಚುನಾವಣೆ ಮುಂದೂಡುವಂತೆ ಕೇರಳ ಮುಸ್ಲಿಂ ಸಂಘಟನೆ ಒತ್ತಾಯ
ಮತದಾನImage Credit source: Newsclick
Follow us
ನಯನಾ ರಾಜೀವ್
|

Updated on: Mar 17, 2024 | 10:11 AM

ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ(Lok Sabha Election)ಯ ದಿನಾಂಕವನ್ನು ಘೋಷಿಸಿದೆ. ಶುಕ್ರವಾರ ನಡೆಯಲಿರುವ ಚುನಾವಣೆಯನ್ನು ಮುಂದೂಡುವಂತೆ ಕೇರಳ ಮುಸ್ಲಿಂ ಸಂಘಟನೆಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿವೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ಕೇರಳದ ಮುಸ್ಲಿಂ ಸಂಘಟನೆಯು ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ, ಶುಕ್ರವಾರ ಮುಸ್ಲಿಂ ಸಮುದಾಯಕ್ಕೆ ಪವಿತ್ರ ದಿನವಾಗಿದೆ.

ಶುಕ್ರವಾರ, ಏಪ್ರಿಲ್ 26 ರಂದು ಕೇರಳದಲ್ಲಿ ಚುನಾವಣೆ ನಡೆಸುವುದರಿಂದ ಮತದಾರರು, ಚುನಾವಣಾ ಅಧಿಕಾರಿಗಳು ಮತ್ತು ಪೋಲಿಂಗ್ ಏಜೆಂಟ್‌ಗಳಿಗೆ ಅನಾನುಕೂಲತೆ ಉಂಟಾಗುತ್ತದೆ ಎಂದು ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಹೇಳಿದ್ದಾರೆ.

ಮಸೀದಿಗಳಲ್ಲಿ ಮುಸ್ಲಿಮರು ಸೇರುವ ದಿನವಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಈ ದಿನ ಮತದಾನ ಮಾಡಲು ಕಷ್ಟವಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ಅವರು ಹೇಳಿದರು.

ಸಂಘಟನೆಯ ಅಧ್ಯಕ್ಷ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ಮತ್ತು ಪ್ರಧಾನ ಕಾರ್ಯದರ್ಶಿ ಕೆ ಆಲಿಕುಟ್ಟಿ ಮುಸಲಿಯಾರ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಏಪ್ರಿಲ್ 26 ರಂದು ನಡೆಯಲಿರುವ ಮತದಾನವನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ

2024 ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಸಲಾಗುವುದು ಎಂದು ಚುನಾವಣಾ ಆಯೋಗವು ಘೋಷಿಸಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!