ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ(Lok Sabha Election)ಯ ದಿನಾಂಕವನ್ನು ಘೋಷಿಸಿದೆ. ಶುಕ್ರವಾರ ನಡೆಯಲಿರುವ ಚುನಾವಣೆಯನ್ನು ಮುಂದೂಡುವಂತೆ ಕೇರಳ ಮುಸ್ಲಿಂ ಸಂಘಟನೆಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿವೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ಕೇರಳದ ಮುಸ್ಲಿಂ ಸಂಘಟನೆಯು ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ, ಶುಕ್ರವಾರ ಮುಸ್ಲಿಂ ಸಮುದಾಯಕ್ಕೆ ಪವಿತ್ರ ದಿನವಾಗಿದೆ.
ಶುಕ್ರವಾರ, ಏಪ್ರಿಲ್ 26 ರಂದು ಕೇರಳದಲ್ಲಿ ಚುನಾವಣೆ ನಡೆಸುವುದರಿಂದ ಮತದಾರರು, ಚುನಾವಣಾ ಅಧಿಕಾರಿಗಳು ಮತ್ತು ಪೋಲಿಂಗ್ ಏಜೆಂಟ್‌ಗಳಿಗೆ ಅನಾನುಕೂಲತೆ ಉಂಟಾಗುತ್ತದೆ ಎಂದು ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಹೇಳಿದ್ದಾರೆ.
ಮಸೀದಿಗಳಲ್ಲಿ ಮುಸ್ಲಿಮರು ಸೇರುವ ದಿನವಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಈ ದಿನ ಮತದಾನ ಮಾಡಲು ಕಷ್ಟವಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ಅವರು ಹೇಳಿದರು.
ಸಂಘಟನೆಯ ಅಧ್ಯಕ್ಷ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ಮತ್ತು ಪ್ರಧಾನ ಕಾರ್ಯದರ್ಶಿ ಕೆ ಆಲಿಕುಟ್ಟಿ ಮುಸಲಿಯಾರ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಏಪ್ರಿಲ್ 26 ರಂದು ನಡೆಯಲಿರುವ ಮತದಾನವನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ.
ಮತ್ತಷ್ಟು ಓದಿ: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ
2024 ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಸಲಾಗುವುದು ಎಂದು ಚುನಾವಣಾ ಆಯೋಗವು ಘೋಷಿಸಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ