AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ

ದೇವೇಂದ್ರ ಯಾದವ್ ದೆಹಲಿ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ.

ದೆಹಲಿ ಕಾಂಗ್ರೆಸ್​ಗೆ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್ ನೇಮಕ
Image Credit source: Hindustan Times
ನಯನಾ ರಾಜೀವ್
|

Updated on:Apr 30, 2024 | 3:23 PM

Share

ದೆಹಲಿ ಕಾಂಗ್ರೆಸ್(Delhi Congress)​ನ ಹಂಗಾಮಿ ಅಧ್ಯಕ್ಷರಾಗಿ ದೇವೇಂದ್ರ ಯಾದವ್(Devendra Yadav) ನೇಮಕಗೊಂಡಿದ್ದಾರೆ. ಪಕ್ಷವು ದೇವೇಂದ್ರ ಯಾದವ್ ಅವರನ್ನು ದೆಹಲಿ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ನಂತರ ಅದನ್ನು ಪಕ್ಷವು ಅಂಗೀಕರಿಸಿತು.

ನಾಮನಿರ್ದೇಶನದ ಸಮಯದಲ್ಲಿ, ಅಧ್ಯಕ್ಷರು ಚುನಾವಣಾ ಆಯೋಗದ ಮುಂದೆ ತಮ್ಮ ಅಭ್ಯರ್ಥಿಗಳನ್ನು ಪರಿಶೀಲಿಸುತ್ತಾರೆ. ಹಾಗಾಗಿ ನಾಯಕರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡುವುದು ಅನಿವಾರ್ಯವಾಗಿದೆ. ಅರವಿಂದರ್ ಸಿಂಗ್ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿ ಪ್ರದೇಶ ಕಾಂಗ್ರೆಸ್​ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ದೇವೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ದೆಹಲಿ ಕಾಂಗ್ರೆಸ್​ ಘಟಕವು ಎಎಪಿ ಜತೆಗಿನ ಮೈತ್ರಿಗೆ ವಿರುದ್ಧವಾಗಿತ್ತು ಆದರೆ ಪಕ್ಷದ ಹೈಕಮಾಂಡ್​ ಅನ್ನು ಮುಂದುವರೆಸಿದೆ ಎಂಬ ಕಾರಣಕೊಟ್ಟು ರಾಜೀನಾಮೆ ನೀಡಿದ್ದಾರೆ.

ಮತ್ತಷ್ಟು ಓದಿ: Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಪೂರ್ಣಾವಧಿ ಅಧ್ಯಕ್ಷರ ನೇಮಕಕ್ಕೆ ಸ್ವಲ್ಪ ಸಮಯ ಹಿಡಿಯಬಹುದು. ಅದಕ್ಕಾಗಿಯೇ ಪಕ್ಷವು ಪ್ರಸ್ತುತ ಹಂಗಾಮಿ ಅಧ್ಯಕ್ಷರ ಬಗ್ಗೆ ಮಾತ್ರ ನಿರ್ಧರಿಸಿದೆ.

ಬಿಜೆಪಿಗೆ ಲಾಭ ಮಾಡಿಕೊಡಲು ಲೋಕಸಭೆ ಚುನಾವಣೆಗೂ ಮುನ್ನ ಲವ್ಲಿ ಈ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ರಾಜ್ಯಾಧ್ಯಕ್ಷ ಅನಿಲ್ ಚೌಧರಿ ಆರೋಪಿಸಿದ್ದಾರೆ. ಲವ್ಲಿ ರಾಜೀನಾಮೆಗೆ ಆಯ್ಕೆ ಮಾಡಿಕೊಂಡ ಸಮಯ ತುಂಬಾ ತಪ್ಪು ಎಂದು ಚೌಧರಿ ಹೇಳಿದ್ದಾರೆ. ಲವ್ಲಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Tue, 30 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್