ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು

ಭೋಜ್​ಪುರಿ ನಟ ಪವನ್​ಸಿಂಗ್ ಮತ್ತೆ ಯೂಟರ್ನ್​ ಹೊಡೆದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು
ಪವನ್​ ಸಿಂಗ್
Follow us
|

Updated on:Mar 13, 2024 | 3:14 PM

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರಾಕರಿಸಿದ್ದ ಭೋಜ್​ಪುರಿ ನಟ ಪವನ್​ ಸಿಂಗ್ ಮತ್ತೆ ಯು-ಟರ್ನ್​ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಭೋಜ್​ಪುರಿ ಗಾಯಕ, ನಟ ಪವನ್​ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದರೆ ಟಿಕೆಟ್ ಸಿಕ್ಕ ಕೇವಲ 24 ಗಂಟೆಗಳ ನಂತರ ಅವರು ಅಸನ್ಸೋಲ್​ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಪ್ರಸ್ತುತ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್​ ಕ್ಷೇತ್ರದಿಂದ ಟಿಎಂಸಿ ಸಂಸದರಾಗಿದ್ದಾರೆ.

ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಅಸನ್ಸೋಲ್​ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪವನ್​ ಸಿಂಗ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಮಯ ಬಂದ ನಂತರ ತಿಳಿಸಲಾಗುವುದು ಎಂದು ಪವನ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಪವನ್​ ಸಿಂಗ್ ಯಾರು? ಪವನ್​ ಸಿಂಗ್ ಭೋಜ್​ಪುರಿ ಗಾಯಕ, ಅವರು ಬಿಹಾರದಲ್ಲಿ ಜನವರಿ 5, 1986ರಲ್ಲಿ ಜನಿಸಿದರು. ಅವರು ರಜಪೂತ ಕುಟುಂಬಕ್ಕೆ ಸೇರಿದವರು. ಅವರು ಭೋಜ್​ಪುರಿ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Wed, 13 March 24

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?