ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು

ಭೋಜ್​ಪುರಿ ನಟ ಪವನ್​ಸಿಂಗ್ ಮತ್ತೆ ಯೂಟರ್ನ್​ ಹೊಡೆದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಟಿಕೆಟ್ ಬೇಡವೆಂದು ಧಿಕ್ಕರಿಸಿ ಹೋಗಿದ್ದ ಭೋಜ್​ಪುರಿ ನಟ ಪವನ್​ ಸಿಂಗ್​ ನಿರ್ಧಾರ ಮತ್ತೆ ಬದಲು
ಪವನ್​ ಸಿಂಗ್

Updated on: Mar 13, 2024 | 3:14 PM

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರಾಕರಿಸಿದ್ದ ಭೋಜ್​ಪುರಿ ನಟ ಪವನ್​ ಸಿಂಗ್ ಮತ್ತೆ ಯು-ಟರ್ನ್​ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪವನ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಭೋಜ್​ಪುರಿ ಗಾಯಕ, ನಟ ಪವನ್​ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದರೆ ಟಿಕೆಟ್ ಸಿಕ್ಕ ಕೇವಲ 24 ಗಂಟೆಗಳ ನಂತರ ಅವರು ಅಸನ್ಸೋಲ್​ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಪ್ರಸ್ತುತ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್​ ಕ್ಷೇತ್ರದಿಂದ ಟಿಎಂಸಿ ಸಂಸದರಾಗಿದ್ದಾರೆ.

ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ
ಅಸನ್ಸೋಲ್​ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪವನ್​ ಸಿಂಗ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಮಯ ಬಂದ ನಂತರ ತಿಳಿಸಲಾಗುವುದು ಎಂದು ಪವನ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

ಪವನ್​ ಸಿಂಗ್ ಯಾರು?
ಪವನ್​ ಸಿಂಗ್ ಭೋಜ್​ಪುರಿ ಗಾಯಕ, ಅವರು ಬಿಹಾರದಲ್ಲಿ ಜನವರಿ 5, 1986ರಲ್ಲಿ ಜನಿಸಿದರು. ಅವರು ರಜಪೂತ ಕುಟುಂಬಕ್ಕೆ ಸೇರಿದವರು. ಅವರು ಭೋಜ್​ಪುರಿ ಚಿತ್ರರಂಗದ ಅತ್ಯಂತ ದುಬಾರಿ ನಟರಲ್ಲಿ ಒಬ್ಬರಾಗಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Wed, 13 March 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us