ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಲಿದೆ ಎಂದು ಹೇಳುತ್ತಾ ಜನರತ್ತ ಕೈ ಬೀಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನಲ್ಲಿ ಇಂದು ಮತ ಚಲಾಯಿಸಿದ್ದಾರೆ ಬಳಿಕ ಜನರೆಡೆಗೆ ಕೈ ಬೀಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ(Lok Sabha Election) ಆರಂಭವಾಗಿದ್ದು ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅಹಮದಾಬಾದ್​ನಲ್ಲಿ ಮತದಾನ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ಇರುವುದು ನಿಮ್ಮ ಕೈಲಿದೆ ಎಂದು ಜನರೆಡೆಗೆ ಕೈಬೀಸಿದ್ದಾರೆ. ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ, ಸೂರತ್ ಹೊರತುಪಡಿಸಿ ಗುಜರಾತ್‌ನ ಎಲ್ಲಾ 25 ಸ್ಥಾನಗಳಲ್ಲಿ ಮತದಾನ ನಡೆಯುತ್ತಿದೆ.

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಈಗಾಗಲೇ ಸೂರತ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿರುವ ರಾಜಭವನದಿಂದ ಮತ ಚಲಾಯಿಸಲು ನೇರವಾಗಿ ಅಹಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿದರು. ಇಲ್ಲಿ ಗೃಹ ಸಚಿವ ಮೋದಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಇದಾದ ಬಳಿಕ ಮೋದಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಮತದಾನದ ನಂತರ ಪ್ರಧಾನಿ ಮೋದಿ ಜನತೆಗೆ ಶುಭಾಶಯ ಕೋರಿದರು. ಬೆರಳಿಗೆ ಹಾಕಿರುವ ಶಾಯಿಯನ್ನೂ ತೋರಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಅವರು ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದರು. ನಮ್ಮ ದೇಶದಲ್ಲಿ ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಮತ್ತು ಈ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಬೇಸಿಗೆಯಾಗಿರುವ ಕಾರಣ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹೆಚ್ಚು ನೀರು ಕುಡಿಯಿರಿ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:28 am, Tue, 7 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us