AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಪುರಿ ಜಗನ್ನಾಥ ದೇವಾಲಯದಲ್ಲಿ ಪೂಜೆ, ಸಂಬಿತ್ ಪಾತ್ರ ಬೆಂಬಲಿಸಿ ಮೋದಿ ರೋಡ್​ ಶೋ

ಲೋಕಸಭೆ ಚುನಾವಣೆ(Lok Sabha Election)ಯ ಪ್ರಚಾರ ಬಿರುಸಿನಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)  ಇಂದು ಪುರಿಯಲ್ಲಿ ರೋಡ್​ ಶೋ ನಡೆಸಿದರು. ಇಂದು ಬೆಳಗ್ಗೆ ಪುರಿ ಜಗನ್ನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರ ಅವರ ಪರವಾಗಿ ರೋಡ್​ ಶೋ ನಡೆಸಿದರು

Lok Sabha Elections 2024: ಪುರಿ ಜಗನ್ನಾಥ ದೇವಾಲಯದಲ್ಲಿ ಪೂಜೆ, ಸಂಬಿತ್ ಪಾತ್ರ ಬೆಂಬಲಿಸಿ ಮೋದಿ ರೋಡ್​ ಶೋ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 20, 2024 | 12:11 PM

Share

ಲೋಕಸಭೆ ಚುನಾವಣೆ(Lok Sabha Election)ಯ ಪ್ರಚಾರ ಬಿರುಸಿನಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)  ಇಂದು ಪುರಿಯಲ್ಲಿ ರೋಡ್​ ಶೋ ನಡೆಸಿದರು. ಇಂದು ಬೆಳಗ್ಗೆ ಪುರಿ ಜಗನ್ನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರ ಅವರ ಪರವಾಗಿ ರೋಡ್​ ಶೋ ನಡೆಸಿದರು.

ಸಂಬಿತ್ ಪಾತ್ರ 2019 ರ ಚುನಾವಣೆಯಲ್ಲಿ ಬಿಜೆಡಿಯ ಪಿನಾಕಿ ಮಿಶ್ರಾ ವಿರುದ್ಧ ಸೋತಿದ್ದರು. ಈ ಬಾರಿ ಅವರು ಕಾಂಗ್ರೆಸ್‌ನ ಜಯ ನಾರಾಯಣ ಪಟ್ನಾಯಕ್ ಮತ್ತು ಬಿಜೆಡಿಯ ಅರೂಪ್ ಪಟ್ನಾಯಕ್ ಅವರ ವಿರುದ್ಧ ಕಣದಲ್ಲಿದ್ದಾರೆ.

ರೋಡ್ ಶೋ ವೇಳೆ ಸಾವಿರಾರು ಜನರು ಪ್ರಧಾನಿ ಮೋದಿ ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ಪುರಿಯಲ್ಲಿ ಮಹಾಪ್ರಭು ಜಗನ್ನಾಥನನ್ನು ಪ್ರಾರ್ಥಿಸಿದೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಮತ್ತು ನಮ್ಮನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಸೋಮವಾರ ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಒಂದು ದಿನದ ಭೇಟಿಯಲ್ಲಿದ್ದಾರೆ. ಧೆಂಕನಲ್, ಒಡಿಶಾದ ಕಟಕ್ ಮತ್ತು ಪಶ್ಚಿಮ ಬಂಗಾಳದ ತಮ್ಲುಕ್ ಮತ್ತು ಜಾರ್ಗ್ರಾಮ್ನಲ್ಲಿ ಎರಡು ರ್ಯಾಲಿಗಳನ್ನು ನಡೆಸಲಿದ್ದಾರೆ.

ಇದಕ್ಕೂ ಮುನ್ನ, ಐದನೇ ಹಂತದ ಲೋಕಸಭೆ ಚುನಾವಣೆಗೆ ದಾಖಲೆ ಪ್ರಮಾಣದಲ್ಲಿ ತಮ್ಮ ಹಕ್ಕು ಚಲಾಯಿಸುವಂತೆ ಮತದಾರರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು. ಅಲ್ಲದೆ ಮಹಿಳೆಯರು ಮತ್ತು ಯುವ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿಶೇಷ ಮನವಿ ಮಾಡಿದರು.

ಮತ್ತಷ್ಟು ಓದಿ: ಪುರುಲಿಯಾದಲ್ಲಿ ಪ್ರಧಾನಿ ಮೋದಿ ಕಂಡು ಭಾವಪರವಶರಾದ ಜನರು; ರೋಡ್​ಶೋಗೆ ಭರ್ಜರಿ ಸ್ಪಂದನೆ

2024 ರ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ 6 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದೆ. 49 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇದೇ ವೇಳೆ ಆಡಳಿತ ಬಿಗಿ ಭದ್ರತೆ ಹಾಗೂ ವ್ಯವಸ್ಥೆ ಮಾಡಿದೆ. ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷವು ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ, ಆದರೆ ಪ್ರತಿಪಕ್ಷ ಇಂಡಿಯಾ ಒಕ್ಕೂಟವು ಪ್ರಧಾನಿ ಮೋದಿಯವರ ವಿಜಯವನ್ನು ತಡೆಯುವ ಪ್ರಯತ್ನದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 20 May 24