AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Kerala Visit: ಲೋಕಸಭೆ ಚುನಾವಣೆ, ಕೇರಳಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಕೇರಳ(Kerala)  ಪ್ರವಾಸ ಕೈಗೊಳ್ಳಲಿದ್ದಾರೆ, ಒಂದು ತಿಂಗಳೊಳಗೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ 16ಕ್ಕೆ ಕೇರಳ ತಲುಪಲಿದ್ದು ಕೊಚ್ಚಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಅಭಿನಂದಿಸಲು ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು.

PM Modi Kerala Visit: ಲೋಕಸಭೆ ಚುನಾವಣೆ, ಕೇರಳಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: The Week
ನಯನಾ ರಾಜೀವ್
|

Updated on: Jan 10, 2024 | 10:52 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಕೇರಳ(Kerala)  ಪ್ರವಾಸ ಕೈಗೊಳ್ಳಲಿದ್ದಾರೆ, ಒಂದು ತಿಂಗಳೊಳಗೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ 16ಕ್ಕೆ ಕೇರಳ ತಲುಪಲಿದ್ದು ಕೊಚ್ಚಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಅಭಿನಂದಿಸಲು ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು.

ನಂತರ ಜನವರಿ 17 ರಂದು ಗುರುವಾಯೂರಿನಲ್ಲಿ ನಡೆಯಲಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ಮದುವೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನವರಿ 16ರಂದು ಕೊಚ್ಚಿಗೆ ತಲುಪಲಿದ್ದು, ಸಂಜೆ 5 ಗಂಟೆ ಸುಮಾರಿಗೆ ರೋಡ್​ ಶೋ ನಡೆಯಲಿದೆ. ಬುಧವಾರ ಗುರುವಾಯೂರಿಗೆ ತೆರಳಲಿದ್ದಾರೆ ಬೆಳಗ್ಗೆ 7 ಗಂಟೆಗೆ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ 10 ಗಂಟೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಅವರು ಕೇರಳದಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬುಧವಾರ ಸಂಜೆ ವೇಳೆಗೆ ಪ್ರಧಾನಿ ವಾಪಸಾಗಲಿದ್ದಾರೆ.

ಪ್ರಧಾನಿ ಮತ್ತು ಕೇಂದ್ರ ನಾಯಕರ ಭೇಟಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತೇಜನ ನೀಡಲಿದೆ ಎಂದು ಬಿಜೆಪಿ ನಂಬಿದೆ. ಅಮಿತ್​ ಶಾ ಕೂಡ ಆಗಮಿಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Narendra Modi: ಕೇರಳದ ಮಹಾನ್ ವ್ಯಕ್ತಿಗಳು ಯುವಕರಿಗೆ ಸ್ಫೂರ್ತಿಯಾಗಬೇಕು: ನರೇಂದ್ರ ಮೋದಿ

ಜನವರಿ 27 ರೊಳಗೆ ತನ್ನ ಸ್ಟಾರ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದ್ದು, ಪಕ್ಷವು ಹಲವು ಕಡೆ ಪಾದಯಾತ್ರೆಗಳನ್ನು ನಡೆಸಲಿದೆ. ತ್ರಿಶೂರ್‌ನಲ್ಲಿ ಸುರೇಶ್ ಗೋಪಿ, ಅಟ್ಟಿಂಗಲ್‌ನಲ್ಲಿ ವಿ ಮುರಳೀಧರನ್ ಮತ್ತು ಪಾಲಕ್ಕಾಡ್‌ಗೆ ಸಿ ಕೃಷ್ಣಕುಮಾರ್ ಹೆಸರುಗಳು ಚರ್ಚೆಯಲ್ಲಿವೆ.

ತಿರುವನಂತಪುರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲು ಬಿಜೆಪಿಯ ರಾಜ್ಯ ಘಟಕವು ಹೈಕಮಾಂಡ್​ ಅನ್ನು ಕೇಳಿದೆ ಎಂದು ವರದಿಯಾಗಿದೆ. ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಅನಿಲ್ ಆಂಟೋನಿ ಮಧ್ಯ ಕೇರಳದ ಒಂದು ಕ್ಷೇತ್ರದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ