ನೀವು ನನ್ನವರು, ಮೋದಿ ನಿಮ್ಮವ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಇಂದು ತೆಲಂಗಾಣ ಪ್ರವಾಸದಲ್ಲಿದ್ದಾರೆ, ಅವರು 56,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ, ನೀವು ನನ್ನವರು, ಮೋದಿ ನಿಮ್ಮವ ನಿಮ್ಮೆಲ್ಲಾ ಕಷ್ಟಗಳಿಗೆ ಮೋದಿ ಇದ್ದಾನೆ ಎಂದು ಹೇಳಿದ್ದಾರೆ.

ನೀವು ನನ್ನವರು, ಮೋದಿ ನಿಮ್ಮವ ಎಂದ ಪ್ರಧಾನಿ
ನರೇಂದ್ರ ಮೋದಿ
Follow us
|

Updated on: Mar 04, 2024 | 2:45 PM

ನೀವು ನನ್ನವರು ಮೋದಿ ನಿಮ್ಮವ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ತೆಲಂಗಾಣದ ಆದಿಲಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನನ್ನ ಜೀವನವು ತೆರೆದ ಪುಸ್ತಕವಾಗಿದೆ, ನಾನು ಬಾಲ್ಯದಲ್ಲಿ ನನ್ನ ಮನೆಯನ್ನು ತೊರೆದಿದ್ದೇನೆ, ನಾನು ದೇಶವಾಸಿಗಳಿಗಾಗಿ ಬದುಕುವ ಕನಸನ್ನು ಹೊಂದಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಕನಸುಗಳಿಲ್ಲ, ಆದರೆ ನಿಮ್ಮ ಕನಸುಗಳು ನನ್ನ ನಿರ್ಣಯವಾಗಿರುತ್ತದೆ ಎಂದು ಪ್ರಧಾನಿ ಹೇಳಿದರು.

ದೇಶದ ಕೋಟ್ಯಂತರ ಜನರು ನನ್ನನ್ನು ತಮ್ಮ ಕುಟುಂಬದ ಸದಸ್ಯನೆಂದು ಪರಿಗಣಿಸುತ್ತಾರೆ ಎಂದು ಅವರು ಹೇಳಿದರು. ದೇಶದ 140 ಕೋಟಿ ಜನರಿಗೆ ನಾನು ಇದನ್ನು ಹೇಳುತ್ತೇನೆ, ಇದು ನನ್ನ ಕುಟುಂಬ, ಯಾರೂ ಇಲ್ಲದವರಿಗೂ ಮೋದಿ ಇದ್ದಾನೆ ಎಂದರು.

ಎರಡು ದಿನಗಳ ದಕ್ಷಿಣ ಭಾರತದ ಪ್ರಯಾಣದ ಮೊದಲ ದಿನವಾಗಿದೆ. 56,000 ಕೋಟಿ ರೂ.ಗೂ ಹೆಚ್ಚು ಮೊತ್ತದ 30 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನೂ ನೆರವೇರಿಸಿದರು. ಕಳೆದ 15 ದಿನಗಳಲ್ಲಿ, ಹಲವಾರು ಅಭಿವೃದ್ಧಿ ಯೋಜನೆಗಳು ಪ್ರಾರಂಭವಾಗಿವೆ, ನಾವು ಆತ್ಮನಿರ್ಭರ ಭಾರತದಿಂದ ವಿಕಸಿತ ಭಾರತಕ್ಕೆ ಹೋಗುತ್ತಿದ್ದೇವೆ. ಚುನಾವಣೆಗಳು ಮುಖ್ಯವಲ್ಲ, ಆದರೆ ಅಭಿವೃದ್ಧಿ ಮುಖ್ಯ ಎಂದರು.

ಮತ್ತಷ್ಟು ಓದಿ: PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಆದ್ದರಿಂದಲೇ ತೆಲಂಗಾಣದ ಜನರು ಕೂಡ ಅಬ್ಕಿ ಬಾರ್, 400 ಪಾರ್ ಎಂದು ಹೇಳುತ್ತಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ ತೊಡಗಿರುವ ವಿರೋಧ ಪಕ್ಷದ ಇಂಡಿಯಾ ಬಣದ ನಾಯಕರು ಈಗ ಚಿಂತಿತರಾಗಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ