ಲೋಕಸಭಾ ಚುನಾವಣೆ 2024: ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಎರಡು ಸಿಬ್ಬಂದಿ ಹೃದಯಾಘಾತದಿಂದ ಸಾವು

ಲೋಕಸಭಾ ಚುನಾವಣೆ ಆರಂಭವಾಗಿದ್ದು, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಲೋಕಸಭಾ ಚುನಾವಣೆ 2024: ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಎರಡು ಸಿಬ್ಬಂದಿ ಹೃದಯಾಘಾತದಿಂದ ಸಾವು
ಹೃದಯಾಘಾತ
Follow us
ನಯನಾ ರಾಜೀವ್
|

Updated on:May 07, 2024 | 9:38 AM

2024ರ ಲೋಕಸಭಾ ಚುನಾವಣೆ(Lok Sabha Election)ಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಇಂದು ಮತದಾನದ ವೇಳೆ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸುಪೌಲ್​ನಲ್ಲಿ ಚುನಾವಣೆಗೆ ಕರ್ತವ್ಯಕ್ಕೆಂದು ನೇಮಿಸಿರುವ ಅಧಿಕಾರಿ ಮತ್ತು ಅರಾರಿಯಲ್ಲಿ ಹೋಮ್​ ಗಾರ್ಡ್​ ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರಿಗೂ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಬಿಎಸ್‌ಪಿ ಅಭ್ಯರ್ಥಿ ನಿಧನದ ಕಾರಣ ಏಪ್ರಿಲ್ 26ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಲಾಗಿತ್ತು.

ಇಂದು ಮತದಾನ ನಡೆಯಲಿರುವ ಕ್ಷೇತ್ರಗಳ ಪೈಕಿ ಗುಜರಾತ್ ಗರಿಷ್ಠ 25 ಸ್ಥಾನಗಳನ್ನು ಹೊಂದಿದೆ. ಇದಲ್ಲದೆ ಕರ್ನಾಟಕದ 14, ಮಹಾರಾಷ್ಟ್ರದ 11, ಉತ್ತರ ಪ್ರದೇಶದ 10, ಮಧ್ಯಪ್ರದೇಶದ 9, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ತಲಾ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗೋವಾದಲ್ಲಿ ತಲಾ ಒಂದು ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ.

ಸುಪೌಲ್ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 71 ಸಾವಿರದ 284 ಮತದಾರರು ಪ್ರಥಮ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇದರಲ್ಲಿ 36 ಸಾವಿರದ 349 ಯುವಕರು ಹಾಗೂ 32 ಸಾವಿರದ 736 ಬಾಲಕಿಯರು ಸೇರಿದ್ದಾರೆ. ಸುಪೌಲ್ ಲೋಕಸಭಾ ಕ್ಷೇತ್ರವು ಅತಿ ಹೆಚ್ಚು ಯಾದವ ಮತದಾರರನ್ನು ಹೊಂದಿದೆ.

ಸುಪೌಲ್​ನಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ವರ್ಸಸ್ ಇಂಡಿ ಮೈತ್ರಿಕೂಟದ ನಡುವೆ ಕುತೂಹಲಕಾರಿ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ಎನ್‌ಡಿಎಯಿಂದ ನಿರ್ಗಮಿತ ಜೆಡಿಯು ಸಂಸದ ದಿಲೇಶ್ವರ್ ಕಾಮತ್ ಅವರು ಅತ್ಯಂತ ಹಿಂದುಳಿದ ವರ್ಗದಿಂದ ಚುನಾವಣಾ ಕಣದಲ್ಲಿದ್ದಾರೆ. ಆದರೆ ದಲಿತ ಸಮುದಾಯದಿಂದ ಬಂದಿರುವ ಇಂಡಿಯಾ ಅಲಯನ್ಸ್‌ನಿಂದ ಸಿಹೆನೇಶ್ವರದ ಆರ್‌ಜೆಡಿ ಶಾಸಕ ಚಂದ್ರಹಾಸ್ ಚೌಪಾಲ್ ಕಣದಲ್ಲಿದ್ದಾರೆ.

ಮತ್ತಷ್ಟು ಓದಿ: ಯುವ ಮತದಾರರಿಗಾಗಿ ನೂತನ ಮತಗಟ್ಟೆ: ಬಲೂನ್, ಚಿತ್ರಗಳಿಂದ ಮತಗಟ್ಟೆ ಅಲಂಕಾರ

2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪಶ್ಚಿಮ ಬಂಗಾಳದ 4 ಸ್ಥಾನಗಳಿಗೆ ಇಂದು ನಡೆಯುತ್ತಿದೆ. ಏತನ್ಮಧ್ಯೆ, ಇಂದು ಬೆಳಗ್ಗೆ ಜಂಗಿಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಘೋಷ್, ಟಿಎಂಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು.

ಮುರ್ಷಿದಾಬಾದ್‌ನ ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮೇಲೆ ಕಚ್ಚಾ ಬಾಂಬ್ ಎಸೆದಿರುವ ಬಗ್ಗೆಯೂ ಮಾಹಿತಿ ಇದೆ. ಮತದಾನಕ್ಕೂ ಮುನ್ನವೇ ದೋಮಕಲ್ ರಣರಂಗವಾಗಿ ಮಾರ್ಪಟ್ಟಿದೆ. ಮುರ್ಷಿದಾಬಾದ್‌ನಲ್ಲಿ ಎಡಪಂಥೀಯ ಏಜೆಂಟರನ್ನು ಥಳಿಸಲಾಯಿತು.

ಜಂಗಿಪುರ ಲೋಕಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಘುನಾಥಗಂಜ್ ತೃಣಮೂಲ ಬ್ಲಾಕ್ ಅಧ್ಯಕ್ಷ ಗೌತಮ್ ಘೋಷ್ ಬಿಜೆಪಿ ಅಭ್ಯರ್ಥಿಯೊಂದಿಗೆ ವಾಗ್ವಾದ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:37 am, Tue, 7 May 24

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್