AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ರಾಹುಲ್ ಗಾಂಧಿಗೆ ಸ್ಮೃತಿ ಬಹಿರಂಗ ಸವಾಲು

ದೇಶದಲ್ಲಿ ಕತ್ತೆಲೆ ಇದ್ದಾಗ ಗಾಂಧಿ ಕುಟುಂಬದಲ್ಲಿ ಮಾತ್ರ ಬೆಳಕಿತ್ತು, ಆ ಅಹಂಕಾರ ಇನ್ನೂ ಹಾಗೆಯೇ ಇದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಮ ಮಂದಿರ ಶಂಕುಸ್ಥಾಪನೆ ನಡೆಯುತ್ತಿದ್ದಾಗ ಅವರನ್ನೂ ಆಹ್ವಾನಿಸಲಾಗಿತ್ತು. ಆದರೆ ಅವರು ಅದನ್ನು ತಿರಸ್ಕರಿಸಿದರು. ರಾಹುಲ್ ಗಾಂಧಿಯವರೇ ನೀವು ಕ್ಷೇತ್ರವನ್ನು ಆರಿಸಿ, ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ಹತ್ತು ವರ್ಷಗಳ ಚರ್ಚೆ ನಡೆದುಬಿಡಲಿ ಎಂದರು.

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ, ರಾಹುಲ್ ಗಾಂಧಿಗೆ ಸ್ಮೃತಿ ಬಹಿರಂಗ ಸವಾಲು
ರಾಹುಲ್ ಗಾಂಧಿ, ಸ್ಮೃತಿ ಇರಾನಿImage Credit source: Hindustan Times
ನಯನಾ ರಾಜೀವ್
|

Updated on:Mar 07, 2024 | 4:17 PM

Share

ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ರಾಹುಲ್​ ಗಾಂಧಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ರಾಜಕೀಯ ಬಿಸಿ ಏರಿದೆ. ಏತನ್ಮಧ್ಯೆ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿಗೆ ಎನ್​ಡಿಎ ಹಾಗೂ ಯುಪಿಎ ಎರಡರ ಹತ್ತು ವರ್ಷಗಳ ಬಗ್ಗೆ ಚರ್ಚೆ ನಡೆಸುವಂತೆ ಬಹಿರಂಗ ಸವಾಲು ಹಾಕಿದ್ದಾರೆ.

ನೀವು ಕ್ಷೇತ್ರವನ್ನು ಆರಿಸಿ, ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ನಮೋ ಯುವ ಮಹಾಸಮ್ಮೇಳನದಲ್ಲಿ ಮಾತನಾಡಿದ ಸ್ಮೃತಿ ರಾಹುಲ್ ಗಾಂಧಿ ಅವರನ್ನು ಚರ್ಚೆಗೆ ಆಹ್ವಾನಿಸಿದರು. ನನ್ನ ಧ್ವನಿ ರಾಹುಲ್ ಗಾಂಧಿ ಅವರನ್ನು ತಲುಪುತ್ತಿದ್ದರೆ ತೆರೆದ ಕಿವಿಯಿಂದ ಎಲ್ಲವನ್ನೂ ಕೇಳಬೇಕು, ಯಾರ ಹತ್ತು ವರ್ಷಗಳು ಉತ್ತವೆಂದು ಚರ್ಚಿಸೋಣ ಎಂದಿದ್ದಾರೆ.

ರಾಹುಲ್​ ಗಾಂಧಿ ಅವರು ಭಾರತ್ ಜೋಡೋ ನ್ಯಾಯ ಯಾತ್ರೆಯ ಭಾಗವಾಗಿ ಅಮೇಥಿಗೆ ಭೇಟಿ ನೀಡಿದ್ದರು. ಅಲ್ಲಿ ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹಾಗೂ ತಂದೆ ರಾಜೀವ್​ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಸದರಾಗಿದ್ದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ 40, ಬಿಹಾರದ 12 ಸೀಟುಗಳ ಮೇಲೆ ಕಾಂಗ್ರೆಸ್​ ಕಣ್ಣು

2004ರಲ್ಲಿ ಅಮೇಥಿಯಿಂದ ರಾಜಕೀಯ ಇನ್ನಿಂಗ್ಸ್​ ಆರಂಭಿಸಿದ ರಾಹುಲ್ ಗಾಂಧಿ ಭಾರಿ ಮತಗಳಿಂದ ಗೆಲುವು ಸಾಧಿಸಿದ್ದರು. ಆದಾಗ್ಯೂ 2014ರಲ್ಲಿ ಈ ಅಂತರವು ಗಮನಾರ್ಹವಾಗಿ ಕಡಿಮೆಯಾಗಿತ್ತು. ಏಕೆಂದರೆ ಅಮೇಥಿಯಲ್ಲಿ ಬಿಜೆಪಿಯ ಹುರುಪಿನ ಪ್ರಚಾರವಿತ್ತು. ಆಗಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ತಮ್ಮ ಸಹೋದರಿ ಸ್ಮೃತಿ ಇರಾನಿಗೆ ಮತ ನೀಡುವಂತೆ ಭಾವನಾತ್ಮಕವಾಗಿ ಮನವಿ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:03 pm, Thu, 7 March 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್