ನೀವು ಕ್ಷೇತ್ರವನ್ನು ಆರಿಸಿ ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ರಾಹುಲ್ ಗಾಂಧಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ರಾಜಕೀಯ ಬಿಸಿ ಏರಿದೆ. ಏತನ್ಮಧ್ಯೆ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಎನ್ಡಿಎ ಹಾಗೂ ಯುಪಿಎ ಎರಡರ ಹತ್ತು ವರ್ಷಗಳ ಬಗ್ಗೆ ಚರ್ಚೆ ನಡೆಸುವಂತೆ ಬಹಿರಂಗ ಸವಾಲು ಹಾಕಿದ್ದಾರೆ.
ನೀವು ಕ್ಷೇತ್ರವನ್ನು ಆರಿಸಿ, ನಾವು ಕಾರ್ಯಕರ್ತರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ನಮೋ ಯುವ ಮಹಾಸಮ್ಮೇಳನದಲ್ಲಿ ಮಾತನಾಡಿದ ಸ್ಮೃತಿ ರಾಹುಲ್ ಗಾಂಧಿ ಅವರನ್ನು ಚರ್ಚೆಗೆ ಆಹ್ವಾನಿಸಿದರು. ನನ್ನ ಧ್ವನಿ ರಾಹುಲ್ ಗಾಂಧಿ ಅವರನ್ನು ತಲುಪುತ್ತಿದ್ದರೆ ತೆರೆದ ಕಿವಿಯಿಂದ ಎಲ್ಲವನ್ನೂ ಕೇಳಬೇಕು, ಯಾರ ಹತ್ತು ವರ್ಷಗಳು ಉತ್ತವೆಂದು ಚರ್ಚಿಸೋಣ ಎಂದಿದ್ದಾರೆ.
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ನ್ಯಾಯ ಯಾತ್ರೆಯ ಭಾಗವಾಗಿ ಅಮೇಥಿಗೆ ಭೇಟಿ ನೀಡಿದ್ದರು. ಅಲ್ಲಿ ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಸದರಾಗಿದ್ದರು.
ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ 40, ಬಿಹಾರದ 12 ಸೀಟುಗಳ ಮೇಲೆ ಕಾಂಗ್ರೆಸ್ ಕಣ್ಣು
2004ರಲ್ಲಿ ಅಮೇಥಿಯಿಂದ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ರಾಹುಲ್ ಗಾಂಧಿ ಭಾರಿ ಮತಗಳಿಂದ ಗೆಲುವು ಸಾಧಿಸಿದ್ದರು. ಆದಾಗ್ಯೂ 2014ರಲ್ಲಿ ಈ ಅಂತರವು ಗಮನಾರ್ಹವಾಗಿ ಕಡಿಮೆಯಾಗಿತ್ತು. ಏಕೆಂದರೆ ಅಮೇಥಿಯಲ್ಲಿ ಬಿಜೆಪಿಯ ಹುರುಪಿನ ಪ್ರಚಾರವಿತ್ತು. ಆಗಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ತಮ್ಮ ಸಹೋದರಿ ಸ್ಮೃತಿ ಇರಾನಿಗೆ ಮತ ನೀಡುವಂತೆ ಭಾವನಾತ್ಮಕವಾಗಿ ಮನವಿ ಮಾಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:03 pm, Thu, 7 March 24